Saturday, June 10, 2023

Latest Posts

ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ (Banglore Film Festival) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Cm Basavaraj Bommai) ಚಾಲನೆ ನೀಡಿದ್ದಾರೆ.

ಆರ್‌ಆರ್‌ಆರ್ (RRR) ಖ್ಯಾತಿಯ ಕಥೆ, ಚಿತ್ರಕಥೆ ಬರೆದಿರುವ ವಿ.ವಿಜಯೇಂದ್ರ ಪ್ರಸಾದ್ (V. Vijendra Prasad) ಮುಖ್ಯ ಅತಿಥಿಯಾಗಿ ಬಂದಿದ್ದು, ಚಿತ್ರೋತ್ಸವದ ಸ್ಮರಣ ಸಂಚಿಕೆಯನ್ನು ಅವರು ಉದ್ಘಾಟನಾ ಸಮಾರಂಭದಲ್ಲಿ ಬಿಡುಗಡೆ ಮಾಡಿದ್ದಾರೆ.

ಸಮಾರಂಭದಲ್ಲಿ ಬಾಲಿವುಡ್ ನಿರ್ದೇಶಕ, ಸಿನಿಮಾಟೋಗ್ರಾಫರ್ ಗೋವಿಂದ್ ನಿಹಾಲಾನಿ, ನಟಿ ರಮ್ಯಾ ಕೃಷ್ಣ, ಅಭಿಷೇಕ್ ಅಂಬರೀಶ್, ಸಪ್ತಮಿ ಗೌಡ, ಹರ್ಷಿಕಾ, ಫಿಲ್ಮ್ ಚೇಂಬರ್ ಭಾ.ಮ ಹರೀಶ್ ಭಾಗಿಯಾಗಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದ್ದಾರೆ.
ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಸಚಿವ ರಾಜೀವ್ ಚಂದ್ರಶೇಖರ್, ಆರ್ ಅಶೋಕ್ ಮುಖ್ಯ ಅತಿಥಿಗಳಾಗಿದ್ದರು.

ಕಾರ್ಯಕ್ರಮದ ಉದ್ಘಾಟನಾ ಚಿತ್ರವಾಗಿ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ (Kantara) ಸಿನಿಮಾ ರಾತ್ರಿ 8 ಗಂಟೆಯಿoದ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಪ್ರದರ್ಶಿಸಲಾಗಿದೆ.
ಮಾರ್ಚ್ 23ರಿಂದ 30ರವರೆಗೆ ನಡೆಯಲಿರುವ ಚಿತ್ರೋತ್ಸವದಲ್ಲಿ ವಿವಿಧ ದೇಶಗಳ ಹಲವು ಭಾಷೆಯ ನೂರಕ್ಕೂ ಹೆಚ್ಚು ಸಿನಿಮಾಗಳು ಪ್ರದರ್ಶವಾಗಲಿದೆ. ಬೆಂಗಳೂರಿನ ಒರಯನ್ ಮಾಲ್, ಕಲಾವಿದರ ಸಂಘ ಹಾಗೂ ಸುಚಿತ್ರಾ ಫಿಲ್ಮ್ಸ್‌ನಲ್ಲಿ ಒಂದು ವಾರಗಳ ಕಾಲ ಚಿತ್ರ ಪ್ರದರ್ಶನಗಳು ನಡೆಯಲಿವೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!