ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಶೇಖಾವತ್ ಅವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ: ನೀರಾವರಿ ವಿಷಯಗಳ ಕುರಿತು ಚರ್ಚೆ!

ಹೊಸದಿಗಂತ ವರದಿ, ಬೀದರ್:

ಇಂದು ನವದೇಹಲಿಯಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು, ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಶೇಖಾವತರವರಿಗೆ ಭೇಟಿ ಮಾಡಿ, ರಾಜ್ಯದ ನೀರಾವರಿ ವಿಷಯಗಳ ಕುರಿತು ಚರ್ಚಿಸಿದರು.

ಈ ಸಂಧರ್ಭದಲ್ಲಿ ಕೇಂದ್ರ ನೂತನ ಹಾಗೂ ನವೀಕರಿಸಬಹುದಾದ ಇಂಧನ ಮೂಲ ಹಾಗು ರಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವರಾದ ಭಗವಂತ ಖೂಬಾ ಅವರು, ಜಿಲ್ಲೆಯಲ್ಲಿ ಕೇರೆಗಳ ನಿರ್ಮಾಣ, ಬಂದಾರಾ, ಬ್ರೀಡ್ಜ್ ಕಂ ಬ್ಯಾರೇಜ್‍ಗಳ ನಿರ್ಮಾಣಕ್ಕಾಗಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯ ಸರ್ಫೆಸ್ ಮೈನರ್ ಇರಿಗೇಷನ್ ಅಡಿಯಲ್ಲಿ ಬೀದರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರೂ. 114.61 ಕೋಟಿಯ ಒಟ್ಟು 50 ಕಾಮಗಾರಿಗಳ ಡಿ.ಪಿ.ಆರ್. ಮತ್ತು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯ ಆರ್.ಆರ್.ಆರ್. (ರಿಪೇರ್, ರಿಸ್ಟೋರ್ ಮತ್ತು ರೆಜುವಿನೇಟ್) ಅಡಿಯಲ್ಲಿ ರೂ. 114 ಕೋಟಿಯಡಿ ಒಟ್ಟು 73 ಕಾಮಗಾರಿಗಳ ಡಿ.ಪಿ.ಆರ್. ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಸಲ್ಲಿಕೆಯಾಗಿರುತ್ತದೆ, ಕೂಡಲೆ ಜಿಲ್ಲೆಯ ಕಾಮಗಾರಿಗಳಿಗೆ ಪ್ರಾತಿನಿಧ್ಯ ನೀಡಿ, ಈ ಎಲ್ಲಾ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೊಳಿಸಲು ಭಗವಂತ ಖೂಬಾ ಅವರು ರಾಜ್ಯದ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಗಜೇಂದ್ರಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಬೀದರ ಕ್ಷೇತ್ರವು ಕೃಷಿ ಪ್ರಧಾನವಾದ ಕ್ಷೇತ್ರವಾಗಿದ್ದು, ನಮ್ಮಲ್ಲಿ ಶೇ 60%ಕ್ಕಿಂತ ಹೆಚ್ಚು ಜನ ಕೃಷಿಯನ್ನೆ ಅವಲಂಬಿಸಿದ್ದಾರೆ, ಈ ಕಾಮಗಾರಿಗಳ ಪ್ರಾರಂಭದಿಂದ ಬೀದರ ಕ್ಷೇತ್ರದ ನೀರಾವರಿಗೆ ಅನುಕೂಲವಾಗಲಿದೆ ಹಾಗೂ ರೈತರಿಗೆ ಸಹಾಯವಾಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮಾನ್ಯ ಜಲಸಂಪನ್ಮೂಲ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ.

ನಂತರ ಮುಖ್ಯಮಂತ್ರಿಗಳು ಹಾಗೂ ಎಲ್ಲಾ ಸಚಿವರು, ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವರಾದ ನೀತಿನ ಗಡ್ಕರಿಯವರಿಗೆ ಭೇಟಿ ಮಾಡಿ, ರಾಜ್ಯದಲ್ಲಿ ಉತ್ತಮವಾಗಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿಗಳ ಬಗ್ಗೆ ಸಂತೋಷ ವ್ಯಕ್ತಪಡಿಸಿ, ಇನ್ನು ಊಳಿದಿರುವ ಎಲ್ಲಾ ಹೆದ್ದಾರಿಗಳನ್ನು ಸಹ ಮಂಜೂರಾತಿ ಮಾಡಬೇಕೆಂದು ಕೋರಿ, ಇಲಾಖೆ ಇನ್ನು ಹಲವಾರು ವಿಷಯಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ ಜೋಷಿ, ರಾಜ್ಯದ ಬೃಹತ್ ಮತ್ತು ಜಲಸಂಪನ್ಮೂಲ ಸಚಿವರಾದ ಗೋವಿಂದ ಎಮ್. ಕಾರಜೋಳ, ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ದಿ ಸಕ್ಕರೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಪಾಟೀಲ್ ಮುನೇನಕೋಪ್ಪ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!