ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಿದ ಸಿಎಂ ಬೊಮ್ಮಾಯಿ: 25 ಲಕ್ಷ ರೂ. ಪರಿಹಾರ ಚೆಕ್ ವಿತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದ್ದು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.
ಈ ವೇಳೆ ಪ್ರವೀಣ್ ಅವರ ಪತ್ನಿ , ತಾಯಿಗೆ ಧೈರ್ಯ ತುಂಬಿದ ಸಿಎಂ,  ಸರಕಾರದಿಂದ 25 ಲಕ್ಷ ರೂ ಪರಿಹಾರದ ಚೆಕ್ ಅನ್ನು ನೀಡಿದ್ದಾರೆ.


ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಗೃಹ ಸಚಿವ ಆರಗ ಜ್ಞಾನೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ. ಮೊದಲಾದವರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!