Saturday, September 23, 2023

Latest Posts

‘ದಾಸೋಹ ದಿನ’ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಭಾಗಿ

ದಿಗಂತ ವರದಿ ತುಮಕೂರು:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮಿಯವರ ಲಿಂಗೈಕ್ಯ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ದಾಸೋಹ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಠದ ವಿದ್ಯಾರ್ಥಿಗಳಿಗೆ ಊಟ ಬಡಿಸುವ ಮೂಲಕ ದಾಸೋಹ ದಿನ ಆಚರಿಸಿದರು.

ಈ ಸಂದರ್ಭದಲ್ಲಿ ಸಿದ್ದಗಂಗಾ ಮಠದ ಪೀಠಾಧಿಪತಿ ಶ್ರೀ ಸಿದ್ದಲಿಂಗ ಸ್ವಾಮೀಜಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ ಸಿ ಮಾಧುಸ್ವಾಮಿ,ಶಿಕ್ಷಣ ಸಚಿವ ಬಿ.ಸಿ.ನಾಗೇಶ್. ಸಂಸದ ಜಿ.ಎಸ್.ಬಸವರಾಜು. ಶಾಸಕ ಜ್ಯೋತಿ ಗಣೇಶ್ ,ಮಾಜಿ ಸಚಿವ ಸೊಗಡು ಶಿವಣ್ಣ. ಮಾಜಿ ಶಾಸಕ ಸುರೇಶ್ ಗೌಡ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!