ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು: ಇಂದು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರ್.ಟಿ. ನಗರದಲ್ಲಿರುವ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಸಮಸ್ತ ಕರ್ನಾಟಕದ ಜನತೆ ಹೆಸರಿನಲ್ಲಿ ಅರ್ಚನೆ ಮಾಡಿಸಿದ ಸಿಎಂ, ರಾಜ್ಯದ ಜನತೆಗೆ ಸುಖ ಶಾಂತಿ ನೆಮ್ಮದಿಯನ್ನು ಕರುಣಿಸಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದರು.
ಪೂಜೆ ಸಲ್ಲಿಸಿದ ಬಳಿಕ ಮುಖ್ಯಮಂತ್ರಿಗಳು ಅಲ್ಲಿರುವ ಪೌರ ಕಾರ್ಮಿಕರ ಜೊತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಉಪಸ್ಥಿತರಿದ್ದರು.