ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23ನೇ ಸಾಲಿನ ಪೂರಕ ಬಜೆಟ್ ಮಂಡನೆ ಮಾಡಿದ್ದಾರೆ.
ಅಧಿವೇಶನದ ಕೊನೆಯ ದಿನ ಇದಾಗಿದ್ದು, 8001.13 ಕೋಟಿ ರೂ.ಗಳ ಪೂರಕ ಅಂದಾಜು ಬಜೆಟ್ ಮಂಡಿಸಿದ್ದಾರೆ.
ರಾಜ್ಯ ಅಸೆಂಬ್ಲಿ ಚುನಾವಣೆ ಹತ್ತಿರದಲ್ಲೇ ಇದ್ದು, ಫೆಬ್ರವರಿಯಲ್ಲಿ ತಾತ್ಕಾಲಿಕ ಬಜೆಟ್ ಮಂಡಿಸಲಿದ್ದಾರೆ. ಡಿಸಾಸ್ಟರ್ ರೆಸ್ಪಾನ್ಸ್ ಫಂಡ್ಗೆ 1,396 ಕೋಟಿ ರೂ. ಮನ್ರೇಗಾ ಯೋಜನೆಗೆ 750 ಕೋಟಿ ರೂಪಾಯಿ, ಇಂಧನ ಸೆಕ್ಟರ್ನಲ್ಲಿ ಈಕ್ವಿಟಿ ಖರೀದಿಗೆ 500ಕೋಟಿ ರೂಪಾಯಿ ಮೀಸಲಿಡಲಾಗಿದೆ.