ಹೊಸದಿಗಂತ ವರದಿ, ಹುಬ್ಬಳ್ಳಿ:
ಯಾವುದೇ ದೇಶದ ಪ್ರಗತಿಗೆ ಅಲ್ಲಿಯ ಶಾಂತಿ ಸುವ್ಯವಸ್ಥೆ ಮುಖ್ಯವಾಗಿದ್ದು, ಶಾಂತಿಯಿಲ್ಲವಾದೆ ಪ್ರಗತಿ ಯಾವತ್ತು ಸಾಧ್ಯವಿಲ್ಲ. ಅದಕ್ಕಾಗಿ ದೇಶದ ಆಂತರಿಕ ಭದ್ರತೆ ಮತ್ತು ಪ್ರಗತಿಗೆ ಪೊಲೀಸ್ ಸೇವೆ ಅಗತ್ಯವಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಗುರುವಾರ ಹಳೆ ಸಿ.ಆರ್ ಮೈದಾನದಲ್ಲಿ ಆಯೋಜಿಸಲಾದ ಪೊಲೀಸ್ ಸಂಸ್ಮರಣ ದಿನಾಚರಣೆಯಲ್ಲಿ ಭಾಗವಹಿಸಿ ಹುತಾತ್ಮರಾದ ಪೊಲೀಸರಿಗೆ ಹೂ ಗುಚ್ಛ ಸಮರ್ಪಿಸಿ ಮಾತನಾಡಿದರು.
ಜಗತ್ತಿನ ಹಲವು ದೇಶಗಳಲ್ಲಿ ಆಂತರಿಕ ಕ್ಷೋಭೆ ಮತ್ತು ಭಯೋತ್ಪಾದಕ ಕೈಯಲ್ಲಿ ಸಿಲುಕಿ ಅಲ್ಲಿನ ಮನುಷ್ಯರು ಬದುಕು ಭಯದವಾತಾವರಣದಲ್ಲಿ ಬದುಕುವಂತಾಗಿದೆ. ಆದರೆ ಭಾರತದ ದೇಶದಲ್ಲಿ ಆಂತರಿಕ ಮತ್ತು ಬಾಹ್ಯವಾಗಿ ಸೈನೆ ಮತ್ತು ಪೊಲೀಸ್ ಕಾನೂನಿ ಸುವ್ಯವಸ್ಥೆ ಕಾಪಾಡುವ ಮೂಲಕ ಭಯ ರಹಿತ ಜೀವನ ನಡಿಸಲು ಶ್ರಮ ಪಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸಭಾಪತಿ, ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕ ಪ್ರಸಾದ ಅಬ್ಬಯ್ಯ, ಈರಣ್ಣ ಜಡಿ, ಹುಡಾ ಅಧ್ಯಕ್ಷ ನಾಗೇಶ ಕಲಬುರಗಿ, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಪ್ರತಾಪ್ ರೆಡ್ಡಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಪೊಲೀಸ್ ಆಯುಕ್ತ ಲಾಬೂರಾಮ ಇದ್ದರು.