ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಕರಾವಳಿ ಭಾಗದಲ್ಲಿ ಅಧಿಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವೆಡೆ ಹಾಗೂ ಕರಾವಳಿ ಭಾಗದಲ್ಲಿ ಪುನ: ಹೆಚ್ಚು ಮಳೆಯಾಗುತ್ತಿದೆ. ಮಳೆ ಅನಾಹುತದಿಂದ ಸಾವು ನೋವುಗಳಾಗಿದ್ದು, ಈ ಬಗ್ಗೆ ಇಂದು ಸಭೆ ನಡೆಸಲಾಗುವುದು. ಹೆಚ್ಚು ಮಳೆಯಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.