ಮಳೆಯಿಂದ ಹಾನಿ: ವಿಳಂಬ ಮಾಡದೆ ತಕ್ಷಣವೇ ಗೆ ಪರಿಹಾರ ವಿತರಿಸಿ ಎಂದ ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕರ್ನಾಟಕದಲ್ಲಿ ಎರಡ್ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದ, ಹಲವು ಜಿಲ್ಲೆಗಳಲ್ಲಿ ಭಾರೀ ನಷ್ಟ ಸಂಭವಿಸಿದೆ.

ಈ ಬಗ್ಗೆ ಇಂದು ಇಂದು(ಭಾನುವಾರ) ಗೃಹ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಜತೆ ವಿಡಿಯೋ ಸಂವಾದ ನಡೆಸಿದ್ದು,ಸಂತ್ರಸ್ತರಿಗೆ ವಿಳಂಬ ಮಾಡದೆ ತಕ್ಷಣವೇ ಮನೆ ಮತ್ತು ಬೆಳೆ ಹಾನಿಗೆ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೆರೆಗಳು ಒಡೆಯದಂತೆ ಹಾಗೂ ಬಿರುಕು ಬೀಳದಂತೆ ಎಚ್ಚರಿಕೆ ವಹಿಸಬೇಕು. ಸಮೀಕ್ಷೆ ನಡೆಸಿ ಅಗತ್ಯವಿದ್ದೆಡೆ ತಕ್ಷಣವೇ ದುರಸ್ತಿ ಕಾರ್ಯ ಕೈಗೊಳ್ಳಬೇಕು. ದೊಡ್ಡ ಕೆರೆಗಳಿರುವಲ್ಲಿ ಜಾಗೃತರಾಗಿ ಸಾವು ನೋವು ಸಂಭವಿಸದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.
ಮೈಸೂರು ಹೆದ್ದಾರಿಯಲ್ಲಿ ಮಳೆಯಿಂದಾಗಿ ನೀರು ನಿಂತಿರುವುದರಿಂದ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಇಂದಿನಿಂದಲೇ ಅನುವು ಮಾಡಿಕೊಡುವಂತೆ ಮೈಸೂರು, ರಾಮನಗರ ಹಾಗೂ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹೇಳಿದರು.

ಮಳೆಯಿಂದ ಹಾನಿಗೊಳಗಾಗಿರುವ ರಸ್ತೆ ಮತ್ತು ಸೇತುವೆಗಳನ್ನು ತಕ್ಷಣವೇ ದುರಸ್ತಿ ಮಾಡಬೇಕು. ಅಧಿಕಾರಿಗಳು ಸಂವಹನದ ಮೂಲಕ ಕಾರ್ಯನಿರ್ವಹಿಸಬೇಕು. ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ರಸ್ತೆ ದುರಸ್ತಿ ಕೈಗೊಳ್ಳಬೇಕು. ಸಕಾಲದಲ್ಲಿ ಕಡಿತಗೊಂಡಿರುವ ವಿದ್ಯುತ್ ಸಂಪರ್ಕ ಮರುಸ್ಥಾಪಿಸಬೇಕು ಎಂದು ಸೂಚಿಸಿದರು.

ಸಚಿವರಾದ ಎಸ್.ಟಿ. ಸೋಮಶೇಖರ್, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಉಮೇಶ್ ಕತ್ತಿ ಸಭೆಯಲ್ಲಿ ಪಾಲ್ಗೊಂಡು ತಮ್ಮ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಆಗಿರುವ ಹಾನಿಯ ಕುರಿತು ವಿವರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!