Friday, June 2, 2023

Latest Posts

ವಿಷವುಂಡು ಜನರಿಗೆ ಒಳಿತು ಮಾಡುವ ನಾಯಕ ಪ್ರಧಾನಿ-ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಈ ಬಾರಿ ಅಧಿಕಾರದ ಗದ್ದುಗೆ ಹಿಡಿಯಲು ಕಸರತ್ತು ನಡೆಸುತ್ತಿರುವ ರಾಜಕೀಯ ಪಕ್ಷಗಳು ಭಾರೀ ಮಟ್ಟದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಕೇಂದ್ರ ನಾಯಕರನ್ನು ಆಹ್ವಾನಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿ ಪರ ಮತಬೇಟೆಗಿಳಿದಿದ್ದಾರೆ. ಬೀದರ್‌ನ ಹುಮ್ನಾಬಾದ್‌ನಲ್ಲಿ ನಡೆಯುತ್ತಿರುವ ಬಹಿರಂಗ ಸಭೆಯಲ್ಲಿ ಸಿಎಂ ಬೊಮ್ಮಾಯಿ ಮಾತನಾಡುತ್ತಾ, ವಿಷವುಂಡು ಜನರಿಗೆ ಒಳಿತು ಮಾಡುವ ನಾಯಕ ಪ್ರಧಾನಿ, ಜೊತೆಗೆ ಈ ಸಂದರ್ಭದಲ್ಲಿ ಮೋದಿಯವರ ಕಾರ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಿಎಂ, ಲಿಂಗಾಯತ ನಾಯಕರನ್ನು ಭ್ರಷ್ಟರು ಎನ್ನುವ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಾಚಿಕೆಯಾಗಬೇಕು. ರಾಜ್ಯದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ ಅಂದರೆ ಅದು ಕಾಂಗ್ರೆಸ್‌ ಸರ್ಕಾರ. ಮೋದಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಆಡಿದ ಮಾತು ಸ್ವೀಕಾರಾರ್ಹವಲ್ಲ. ಮೋದಿ ವಿರುದ್ದ ಮಾತನಾಡಿ ಗೆಲುವು ಸಾಧಿಸಬಹುದು ಅಂದುಕೊಂಡರೆ ಅದು ಅವರ ಭ್ರಮೆ ಎಂದರು. ಕಾಂಗ್ರೆಸ್​​ ನಾಯಕರು ಹತಾಶೆಯಿಂದ ಕೆಟ್ಟದಾಗಿ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದ್ರು.

ಅಭಿವೃದ್ಧಿ ವಿಚಾರಕ್ಕೆ ಬಂದರೆ, ಕಾಂಗ್ರೆಸ್ ಸದಾ ಅಡ್ಡಗಾಲು ಹಾಕುತ್ತಿದೆ. ಕರ್ನಾಟಕದಲ್ಲಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಟ್ಟಿದ್ದೇವೆ. ಡಬಲ್ ಎಂಜಿನ್ ಸರ್ಕಾರದಿಂದ ಮಾತ್ರ ಇದು ಸಾಧ್ಯವಾಗಿದೆ. ಜಲ್​ಜೀವನ್​ ಮಿಷನ್​ ಯೋಜನೆಯಡಿ ದೇಶದಲ್ಲಿ 9 ಕೋಟಿ ಕುಟುಂಬಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಇದೆಲ್ಲವೂ ಡಬ್ಲ ಎಂಜಿನ್‌ ಸರ್ಕಾರದಿಂದಷ್ಟೇ ನೆರವೇರಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!