ಹೊಸದಿಗಂತ ಡಿಜಿಟಲ್ ಡೆಸ್ಕ್ :
ಶಿಗ್ಗಾಂವಿ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರದಂದು ನಾಮಪತ್ರ ಸಲ್ಲಿಸಿದರು. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ನಟ ಸುದೀಪ್ ಕೂಡ ಸಾಥ್ ನೀಡಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಸತತ 15 ವರ್ಷಗಳಿಂದ ಆಶೀರ್ವಾದ ಮಾಡಿದ್ದೀರಿ. ಶಿಗ್ಗಾಂವಿ ಕ್ಷೇತ್ರದ ಜನರ ಪ್ರೀತಿಗೆ ನಾನು ಸೋತಿದ್ದೇನೆ. ಶಿಗ್ಗಾಂವಿ ಕ್ಷೇತ್ರದಲ್ಲಿ 100ಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸಿದ್ದೇನೆ. ನಾನು ಮುಖ್ಯಮಂತ್ರಿಯಾಗಿ ವಿದ್ಯಾರ್ಥಿಗಳು, ರೈತರಿಗಾಗಿ ಯೋಜನೆ ಜಾರಿ ಮಾಡಿದ್ದೇನೆ. ರಾಜ್ಯದಲ್ಲಿ 125ಕ್ಕಿಂತ ಹೆಚ್ಚು ಸ್ಥಾನ ಪಡೆದು ಅಧಿಕಾರಕ್ಕೆ ಬಂದೇ ಬರುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಸಮಾವೇಶದಲ್ಲಿ ನಟ ಸುದೀಪ್, ʼಬೊಮ್ಮಾಯಿ ಮಾಮನನ್ನು ಗೆಲ್ಲಿಸಿʼ ಎಂದು ಮತದಾರರಲ್ಲಿ ಮನವಿ ಮಾಡಿದರು.