Saturday, July 2, 2022

Latest Posts

ಭದ್ರಾ, ಕೃಷ್ಣಾ, ಮೇಕೆದಾಟು: ಕೇಂದ್ರ ಜಲಸಂಪನ್ಮೂಲ ಸಚಿವರ ಜತೆ ಸಿಎಂ ಬೊಮ್ಮಾಯಿ ಬಹುಮುಖಿ ಚರ್ಚೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಹೊಸದಿಲ್ಲಿ: ಕರ್ನಾಟಕದ ಭದ್ರಾ ಮೇಲ್ಡಂಡೆ ಯೋಜನೆ(ಯುಬಿಪಿ)ಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲು ಕೇಂದ್ರ ಸರಕಾರದ ತೀರ್ಮಾನವನ್ನು ಶೀಘ್ರ ಅಂತಿಮಗೊಳಿಸಲು ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹೊಸದಿಲ್ಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದ ಸಿಎಂ, ನಂತರ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಡಿಸೆಂಬರ್ 6ರಂದು ಮಹತ್ವದ ಸಭೆ ಇದೆ. ಅದರಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲು ಅಂತಿಮಗೊಳಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಂತೆ ಕೇಂದ್ರ ಜಲಶಕ್ತಿ ಸಚಿವರಲ್ಲಿ ಚರ್ಚಿಸಿದ್ದೇನೆ. ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ನ ತೀರ್ಪಿನ ಪ್ರಕಾರ ಎರಡನೇ ಟ್ರಿಬ್ಯೂನಲ್‌ನ ನೋಟಿಫಿಕೇಶನ್ ಬಗ್ಗೆ ಕೇಂದ್ರ ಸರಕಾರ ತನ್ನ ನಿಲುವನ್ನು ಪ್ರಕಟಿಸಬೇಕು. ಕಾನೂನು ಪ್ರಕಾರ ಟ್ರಿಬ್ಯೂನಲ್ ಸಂಪೂರ್ಣ ವರದಿ ಕೊಟ್ಟ ನಂತರ ಅದನ್ನು ಪಾಲನೆ ಮಾಡದಿದ್ದರೆ ಸುಪ್ರೀಂ ಕೋರ್ಟ್‌ನ ನಿಂದನೆಯಾಗುತ್ತದೆ. ಆದ್ದರಿಂದ ಅದರ ಪಾಲನೆಯಾಗಬೇಕು. ಸಚಿವಾಲಯದಿಂದ ನಿರ್ದೇಶನ ಕೊಡಬೇಕಾಗುತ್ತದೆ ಎಂದು ಸಚಿವರಿಗೆ ತಿಳಿಸಿದ್ದೇನೆ ಎಂದರು.

ನದಿ ಜೋಡಣೆಗೆ ಪಡೆಯಿರಿ ನಮ್ಮ ಅಹವಾಲು: ಗೋದಾವರಿ, ಕಾವೇರಿ, ಕೃಷ್ಣಾ, ಮಹಾನದಿಯ ಜೋಡಣೆ ಬಗ್ಗೆ ನಮ್ಮ ಅಹವಾಲು ಕೇಳದೇ ಅದರ ಡಿಪಿಆರ್ (ವಿಸ್ತೃತ ಯೋಜನಾ ವರದಿ) ತಯಾರಿಸಬಾರದು. ತಮಿಳುನಾಡಿನ ನದಿ ಜೋಡಣಾ ಯೋಜನೆಗೆ ನಮ್ಮ ಮೇಕೆದಾಟು ಯೋಜನೆ ಕ್ಲೀಯರ್ ಆಗದೇ ಕ್ಲಿಯರೆನ್ಸ್ ಕೊಡಬಾರದು ಎಂದು ಹೇಳಿದ್ದೇವೆ. ಈ ಬಗ್ಗೆ ಸುದೀರ್ಘ ಚರ್ಚೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss