Thursday, March 23, 2023

Latest Posts

ಇಂದು ಸಿಎಂ ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್: ಭಾರೀ ನಿರೀಕ್ಷೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್‌ ಮಂಡಿಸಲಿದ್ದಾರೆ.
ಮಧ್ಯಾಹ್ನ 12:30ಕ್ಕೆ ಸಿಎಂ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ 2022-2023ನೇ ಸಾಲಿನ ಬಜೆಟ್‌ ಮಂಡನೆ ಮಾಡಲಿದ್ದು, ಅದಕ್ಕೂ ಮುನ್ನ ಬಜೆಟ್‌ ಅನುಮೋದನೆಗೆ ಸಚಿವ ಸಂಪುಟ ವಿಶೇಷ ಸಭೆ ನಡೆಸಲಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿ ಅವರ ಮೊದಲ ಬಜೆಟ್‌ ಕುರಿತು ಹೆಚ್ಚು ನಿರೀಕ್ಷೆ ಗಳಿದ್ದು, ಕೃಷಿ, ನೀರಾವರಿ, ಶಿಕ್ಷಣ, ಮಹಿಳಾ ಸಬಲೀಕರಣದ ಯೋಜನೆಗಳಿಗೆ ಹೆಚ್ಚು ಒತ್ತು ಕೊಡುವ ಸಾಧ್ಯತೆ ಗಳಿವೆ.
ಕೋವಿಡ್‌ ಬಳಿಕ ರಾಜ್ಯದಲ್ಲಿ ಬೇಡಿಕೆಗಳು ಹೆಚ್ಚಾಗಿದ್ದು, ಫೆ.25ರಂದು ಎಲ್ಲಾ ಇಲಾಖೆಗಳ ಪ್ರತಿನಿಧಿಗಳ ಜತೆ ಸಭೆ ನಡೆಸಿ ಸೂಕ್ತ ಬಜೆಟ್‌ ಸಿದ್ಧಪಡಿಸಲಾಗಿದೆ. ಈ ಬಾರಿಯ ಬಜೆಟ್‌ 2023ರ ಚುನಾವಣೆ ಮೇಲೆಯೂ ಪರಿಣಾಮ ಬೀರಲಿದೆ.
ಇನ್ನು ಬಹು ವರ್ಷಗಳ ಬೇಡಿಕೆಯಂತೆ ಬಿ ಖಾತಾ ಆಸ್ತಿಗಳನ್ನು ಸಕ್ರಮ ಮಾಡುವ ಬಗ್ಗೆ ಕೂಡ ಯೋಜನೆ ತರುವ ಸಾಧ್ಯತೆ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!