Wednesday, March 29, 2023

Latest Posts

ಸ್ವಾಮಿ ವಿವೇಕಾನಂದ ಯುವಶಕ್ತಿ ಸಂಘ ಯೋಜನೆಗೆ ಮಾರ್ಚ್‌ 23 ರಂದು ಚಾಲನೆ, ಏನೀ ಯೋಜನೆ ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕದ ಯುವಕರಿಗೆ ಸ್ವ ಉದ್ಯೋಗ ಕಲ್ಪಿಸಬಹುದಾದ ಇದೇ ಮೊದಲ ಬಾರಿಗೆ ರೂಪಿಸಲಾದ ಮಹತ್ವದ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್‌ 23ರಂದು ಚಾಲನೆ ನೀಡಲಿದ್ದಾರೆ.

ಭಾನುವಾರ ಉದ್ಘಾಟನೆ ಕಾರ್ಯಕ್ರಮ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಸರ್ಕಾರ ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಯೋಜನೆಗೆ
ಚಾಲನೆ ನೀಡುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳು ಬಹಳ ವರ್ಷಗಳಿಂದ ಸಕ್ರಿಯವಾಗಿದ್ದು, ಅದೇ ರೀತಿ
ಯುವಕರಿಗಾಗಿ ಮೊದಲ ಬಾರಿಗೆ ಸ್ವ-ಉದ್ಯೋಗ ಕೈಗೊಳ್ಳಲು ಸರ್ಕಾರ ರೂಪಿಸಿರುವ ‘ಸ್ವಾಮಿ ವಿವೇಕಾನಂದ ಯುವಶಕ್ತಿ ಸಂಘ’ ಯೋಜನೆ ಜಾರಿಗೊಳ್ಳಲಿದೆ.

ಈ ಯೋಜನೆಯ ಬಗೆಗಿನ ಪ್ರಮುಖ ಅಂಶಗಳು :

* ಕರ್ನಾಟಕದಲ್ಲಿ ಒಟ್ಟು 5,951 ಗ್ರಾಮ ಪಂಚಾಯತಿಗಳಿದ್ದು, ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ ಅಡಿ, ಪ್ರತಿಯೊಂದು ಗ್ರಾಮ ಪಂಚಾಯತಿಗೆ ಎರಡು ಜಂಟಿ ಬಾಧ್ಯತಾ ಗುಂಪು ರಚಿಸಲು ಆರ್ಥಿಕ ಇಲಾಖೆಯ ಸಹಮತಿಯನ್ವಯ ಮಾರ್ಚ್ 08ರಂದು ಆದೇಶ ಪ್ರಕಟಿಸಲಾಗಿದೆ.

* ಯೋಜನೆಯ ಬ್ಯಾಂಕ್‌ ಲಿಂಕೇಜ್‌, ಖಾತೆ ತೆರೆಯುವಿಕೆ ಮತ್ತು ಬ್ಯಾಂಕ್‌ ಸಾಲಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ಕೈಗೊಳ್ಳಲು ಸಾಮಾನ್ಯ ಸರ್ವಿಸ್‌ ಸೆಂಟರ್‌, ಭಾರತೀಯ ಸ್ಟೇಟ್‌ ಬ್ಯಾಂಕ್‌ ಹಾಗೂ ಎನ್‌ಎಲ್‌ಎಂ ನಿಂದ ಹಾಗೂ ಬ್ಯಾಂಕರ್ಸ್ ಗಳಿಂದ ಒಟ್ಟು 7,300 ಬಿಸಿ ಸಖಿಗಳ ಸೇವೆ ಪಡೆಯಲಾಗಿದೆ. ಸದರಿಯವರಿಗೆ ರಾಷ್ಟ್ರೀಕೃತ ಬ್ಯಾಂಕ್‌ನಿಂದ 2000 ರೂಪಾಯಿ ಮತ್ತು ಸಹಕಾರಿ ಬ್ಯಾಂಕ್‌ ಗಳು 4000ರೂಪಾಯಿಯನ್ನು ಪ್ರೋತ್ಸಾಹ ಧನವಾಗಿ ನೀಡುತ್ತವೆ.

* 100 ಮಾದರಿ ಪ್ರಸ್ತಾವನೆಗಳನ್ನು ಬ್ಯಾಂಕ್‌ಗಳಿಗೆ ಸಲ್ಲಿಸಲಾಗಿದ್ದು, ಆ ಪೈಕಿ ಸುಮಾರು 551 ಯೋಜನೆಗಳನ್ನು ಬ್ಯಾಂಕುಗಳ ಅನುಮೋದನೆ ಮತ್ತು ಸಾಲ ಮಂಜೂರಾತಿಗಾಗಿ ಸಲ್ಲಿಸಲಾಗಿದೆ. *

* ನ್ಯಾಷನಲ್ ಕ್ರೆಡಿಟ್ ಗ್ಯಾರಂಟಿ ಟ್ರಸ್ಟೀ ಯೋಜನೆ (NCGTC) ಅಡಿಯಲ್ಲಿ ಸ್ವ-ಸಹಾಯ ಗುಂಪುಗಳ ಮಾದರಿಯಲ್ಲಿ ಜಂಟಿ ಬಾಧ್ಯತಾ ಗುಂಪುಗಳನ್ನು ಒಳಪಡಿಸಲು ಈಗಾಗಲೇ ಸನ್ಮಾನ್ಯ ಮುಖ್ಯಮಂತ್ರಿಯವರಿಂದ ಮಾನ್ಯ ಕೇಂದ್ರ ವಿತ್ತೀಯ ಸಚಿವರಿಗೆ ದಿನಾಂಕ: 06.02.2023ರಂದು ಪ್ರಸ್ತಾಪಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!