ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನೇನು ಕೆಲವೇ ಹೊತ್ತಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡಲಿದ್ದು, ಬಜೆಟ್ ಮಂಡನೆಗೂ ಮುನ್ನ ದೇಗುಲಕ್ಕೆ ತೆರಳಿ ಸಿಎಂ ಬೊಮ್ಮಾಯಿ ಪೂಜೆ ಸಲ್ಲಿಸಿದ್ದಾರೆ.
ತಮ್ಮ ನಿವಾಸದ ಹತ್ತಿರದಲ್ಲಿರುವ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಹಣಕಾಸು ಇಲಾಖೆ ಅಧಿಕಾರಿಗಳು ಬಜೆಟ್ ಪ್ರತಿಯನ್ನು ಸಿಎಂ ಬೊಮ್ಮಾಯಿ ಅವರಿಗೆ ನೀಡಿದ್ದಾರೆ. 10:15 ಕ್ಕೆ ಬಜೆಟ್ ಆರಂಭವಾಗಲಿದೆ.