spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಚಿವರ ಪಟ್ಟಿ ಹಿಡಿದು ಬೆಂಗಳೂರಿಗೆ ಬಂದ ಸಿಎಂ ಬೊಮ್ಮಾಯಿ: ಯಾರಿಗೆ ಸಿಗಲಿದೆ ಮಂತ್ರಿ ಪಟ್ಟ?

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗುತ್ತದೆ ಎನ್ನುವ ಕುತೂಹಲ ಇದೀಗ ಭಾರೀ ಹೆಚ್ಚಾಗಿದೆ. ಸಚಿವರ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಗುಟ್ಟು ಬಿಟ್ಟು ಕೊಟ್ಟಿಲ್ಲವಾದ್ದರಿಂದ ಅಪೇಕ್ಷಿತರಲ್ಲಿ ಆತಂಕ ಎದುರಾಗಿದೆ.
ಸಿಎಂ ಬೊಮ್ಮಾಯಿ ತಮ್ಮ ಸಂಪುಟಕ್ಕೆ ಸೇರುವ ಮಂತ್ರಿಗಳ ಪಟ್ಟಿಯನ್ನು ದೆಹಲಿಯಿಂದ ಹೊತ್ತು ಬೆಂಗಳೂರಿಗೆ ತಂದಿದ್ದಾರೆ.
ಏರ್‌ಪೋರ್ಟ್‌ನಿಂದ ನೇರವಾಗಿ ವಿಧಾನಸೌಧಕ್ಕೆ ಆಗಮಿಸುತ್ತಿದ್ದು, ಶಕ್ತಿಕೇಂದ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇನ್ನೇನು ಕೆಲವೇ ಗಂಟೆಗಳಲ್ಲಿ ನೂತನ ಸಚಿವರು ಯಾರಾಗಲಿದ್ದಾರೆ ಎಂದು ತಿಳಿಯಲಿದೆ.
ಈಗಾಗಲೇ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ.
ಸಿಎಂ ಜೊತೆಗೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕೂಡ ಜೊತೆಗಿದ್ದಾರೆ. ಇಂದು ಬೆಳಗ್ಗೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಸಿಎಂ ಬಸವರಾಜ ಬೊಮ್ಮಾಯಿಯವರು ನೂತನ ಸಚಿವರ ಪಟ್ಟಿ ಪ್ರಕಟಿಸಲಿದ್ದಾರೆ.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss