ರಾಜ್ಯದ ರೈತರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಲ್ಲಿ ಯೂರಿಯಾ ಮತ್ತು ಡಿಎಪಿ ಕೊರತೆಯಾಗುವುದಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಮನ್ಸುಖ್ ಮಾಂಡವಿಯ ಅವರು ಆಶ್ವಾಸನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಮನ್ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಬೇಕಿರುವ ರಸಗೊಬ್ಬರದ ಬಗ್ಗೆ ಚರ್ಚೆ ಮಾಡಲಾಯಿತು.ನಮಗೆ ಮುಂಗಾರಿನಲ್ಲಿ ಡಿಎಪಿ ಮತ್ತು ಯೂರಿಯಾ ಅಗತ್ಯವೂ ಇದೆ ಎಂದು ತಿಳಿಸಲಾಗಿದೆ ಎಂದರು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಮೋನಿಯಾ ಮತ್ತು ಇತರೆ ಗೊಬ್ಬರದ ಕೊರತೆಯಿಂದ ಡಿಎಪಿ ಬಗ್ಗೆ ಅನುಮಾನವಿತ್ತು. ಡಿಎಪಿ ಗೊಬ್ಬರ ಸಿಗಲಿದೆ ಎಂದು ಹೇಳಿದ್ದಾರೆ. ಮಂಗಳೂರು ಮತ್ತು ಕಾರವಾರ ಬಂದರಿಗೆ ಬಂದ ಮೇಲೆ ಸಾಗಾಣಿಕೆ ವ್ಯವಸ್ಥೆಯಾಗಬೇಕು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!