ಹೊಸದಿಗಂತ ಡಿಜಿಟಲ್ ಡೆಸ್ಕ್
ರಕ್ಷಿತ್ ಶೆಟ್ಟಿ ನಟಿಸಿ ನಿರ್ಮಾಣ ಮಾಡಿರೋ ಸಿನಿಮಾ 777 ಚಾರ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ.. ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 777 ಚಾರ್ಲಿ ಸಿನಿಮಾ ವೀಕ್ಷಣೆ ಮಾಡಿದ್ದಾರೆ.
ಬೆಂಗಳೂರು ನಗರದ ಒರಾಯನ್ ಮಾಲ್ನಲ್ಲಿ ಮುಖ್ಯಮಂತ್ರಿ ಹಾಗೂ ಇತರ ಸಚಿವರಿಗೆ ವಿಶೇಷ ಸಿನಿಮಾ ಪ್ರದರ್ಶನ ಆಯೋಜಿಸಲಾಗಿದೆ. ಸಂಜೆ 7.30ರ ಶೋಗೆ ಸಿಎಂ ಬೊಮ್ಮಾಯಿ ಜೊತೆಗೆ ಸಚಿವ ಆರ್ ಅಶೋಕ್, ಬಿಸಿ ನಾಗೇಶ್, ಶಾಸಕ ರಘುಪತಿ ಭಟ್ ಸೇರಿದಂತೆ ಕೆಲವರು ಸಾಥ್ ನೀಡಿದ್ದಾರೆ.
ನಟ ರಕ್ಷಿತ್ ಶೆಟ್ಟಿ, ನಿರ್ದೇಶಕ ಕಿರಣ್ ರಾಜ್ ಕೂಡ ಸಿಎಂ ಜೊತೆ ಸಿನಿಮಾ ವೀಕ್ಷಿಸಿದ್ದಾರೆ.