Saturday, August 13, 2022

Latest Posts

ರಾಷ್ಟ್ರಮಟ್ಟದ ಸೈಕ್ಲಿಂಗ್ ಪಟು ಪವಿತ್ರಾಗೆ ಸೈಕಲ್ ಪ್ರದಾನ ಮಾಡಿದ ಸಿಎಂ ಬೊಮ್ಮಾಯಿ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಗದಗ ಜಿಲ್ಲೆಯ ರಾಷ್ಟ್ರಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಪವಿತ್ರಾ ಕುರ್ತಕೋಟಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೈಕಲ್ ನೀಡಿದ್ದಾರೆ.
ರಾಷ್ಟ್ರಮಟ್ಟದ ಕ್ರೀಡಾಪಟು ಆಗಿರುವ ಪವಿತ್ರಾ ತನಗೆ ಸೈಕಲ್ ಬೇಕು ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಈ ಬಗ್ಗೆ ಇಲಾಖೆಗೆ ವಿಷಯ ತಿಳಿದಿದ್ದು, 8 ದಿನದಲ್ಲಿ ಕೆನಡಾದಿಂದ ಸೈಕಲ್ ತರಿಸಿಕೊಡಲಾಗಿದೆ.
ಅನುದಾನ ಪಡೆಯದೆ ದೇಣಿಗೆ ಪಡೆದು ಈ ಕಾರ್ಯ ಮಾಡಿರುವುದಾಗಿ ಸಿಎಂ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಟಿಯಾಲಾದಲ್ಲಿ ಸೈಕ್ಲಿಂಗ್ ಸ್ಪರ್ಧೆ ಇದ್ದು, ಪವಿತ್ರಾ ಅದರಲ್ಲಿ ಪಾಲ್ಗೊಳ್ಳಲಿದ್ದಾರೆ. ಚಿನ್ನದ ಪದಕ ಆಕೆಗೆ ಬರಲಿ ಎಂದು ಸಿಎಂ ಹಾರೈಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss