Friday, March 31, 2023

Latest Posts

ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ವಿತರಣೆಗೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ

ದಿಗಂತ ವರದಿ ವಿಜಯಪುರ:

ಜಿಲ್ಲೆಯ ಬಬಲೇಶ್ವರ ತಾಲೂಕಿನ ಚಿಕ್ಕ ಗಲಗಲಿ ಗ್ರಾಮ ಬಳಿಯ ಕೃಷ್ಣಾನಗರದ ಬಿ.ಟಿ.ಪಾಟೀಲ ಮೆಮೋರಿಯಲ್ ನಂದಿ ಇಂಟರ್ ನ್ಯಾಶನಲ್ ಸಿಬಿಎಸ್‍ಸಿ ಸ್ಕೂಲ್ ಆವರಣದಲ್ಲಿ ಜಲ ಸಂಪನ್ಮೂಲ ಇಲಾಖೆ ಹಾಗೂ ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಗುರುವಾರ ಹಮ್ಮಿಕೊಂಡ 3ನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆಯಡಿಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಧನ ಚೆಕ್ ವಿತರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಸಂಸದ ರಮೇಶ ಜಿಗಜಿಣಗಿ, ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಶಾಸಕ ಎಂ.ಬಿ.ಪಾಟೀಲ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ, ಅಪ್ಪುಗೌಡ ಪಾಟೀಲ ಮನಗೂಳಿ, ನಂದಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಶಶಿಕಾಂತಗೌಡ ಪಾಟೀಲ ಮತ್ತಿತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!