Wednesday, August 10, 2022

Latest Posts

ತವರು ನೆಲದಲ್ಲಿ ದೇವರ ಮೊರೆ ಹೋದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ: ಹಲವು ದೇವಾಲಯಗಳಿಗೆ ಭೇಟಿ

ಹೊಸದಿಗಂತ ವರದಿ, ಶಿವಮೊಗ್ಗ:

ಬಜೆಟ್ ಮಂಡನೆಗೆ ಕೆಲವೇ ದಿನಗಳು ಇರುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತವರು ನೆಲದಲ್ಲಿ ಹಲವು ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಭಾನುವಾರ ಇಲ್ಲಿನ ಸೋಮಿನಕೊಪ್ಪದ ಪಂಚಮುಖಿ ಆಂಜನೇಯ ಸ್ವಾಮಿ ಮತ್ತು ಬನಶಂಕರಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಅಲ್ಲಿ ರುದ್ರಾಭಿಷೇಕ ಹಾಗೂ ಧನ್ವಂತರಿ ಹೋಮ ಆಯೋಜಿಸಲಾಗಿತ್ತು.

ಸೋಮವಾರ ಬೆಳಿಗ್ಗೆ ಇಲ್ಲಿನ ಗೌಡ ಸಾರಸ್ವತ ಸಮಾಜದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನಕ್ಕೆ ತೆರಳಿ ವರ್ಧಂತಿ ಉತ್ಸವದಲ್ಲಿ ಪಾಲ್ಗೊಂಡರು. ಅದಾದ ಬಳಿಕ ಕೋಟೆ ಶ್ರೀ ಮಾರಿಕಾಂಬಾ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಂತರ ನಗರದ ಪುರಾಣಪ್ರಸಿದ್ಧ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಯಕ್ಕೂ ಭೇಟಿ ನೀಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss