July 18, 2026
Saturday, July 18, 2026
spot_img

ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಸಿಎಂ ಕುರ್ಚಿ ಕದನ: ಈ ಕುರಿತು ಶಾಸಕ ಜನಾರ್ದನ ರೆಡ್ಡಿ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕಾರಣದ ಸಿಎಂ ಕುರ್ಚಿಯ ಪೈಪೋಟಿ ದೆಹಲಿ ಅಂಗಳಕ್ಕೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಚರ್ಚೆ ನಡೆಸುತ್ತಿದ್ದಾರೆ. ಇದರ ನಡುವೆ ಗಂಗಾವತಿ ಶಾಸಕ ಜಿ. ಜನಾರ್ದನ ರೆಡ್ಡಿ ಅವರು ಮಹತ್ವದ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.

ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ರೆಡ್ಡಿ ಹೇಳಿಕೆ ನೀಡಿದ್ದಾರೆ.

ಅವಧಿ ಮುಗಿದರು ಸ್ಥಾನ ಬಿಟ್ಟುಕೊಟ್ಟಿಲ್ಲ

ಕೊಪ್ಪಳ ತಾಲೂಕಿನ ಇರಕಲ್‌ಗಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ, ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯನವರು ಸಿಎಂ ಸ್ಥಾನ ಬಿಟ್ಟುಕೊಡುವ ಅನಿವಾರ್ಯತೆ ಎದುರಾಗಿದೆ. ಈ ಕುರಿತು ಹೈಕಮಾಂಡ್‌ನಿಂದ ಕೂಡ ಸಾಕಷ್ಟು ಒತ್ತಡವಿದೆ. ಅಧಿಕಾರಾವಧಿಯ ಎರಡುವರೆ ವರ್ಷಗಳು ಮುಗಿದರು ಆರು ತಿಂಗಳಿನಿಂದ ಸಿದ್ದರಾಮಯ್ಯನವರು ಸ್ಥಾನ ಬಿಟ್ಟುಕೊಟ್ಟಿಲ್ಲ ಎಂದು ಹೇಳಿದರು.

ಸದ್ಯದ ವಾತಾವರಣ ನೋಡುವಾಗ ಸಿದ್ದರಾಮಯ್ಯನವರಿಂದ ಸಿಎಂ ಸ್ಥಾನವನ್ನು ಬಿಡಿಸುವ ನಿರ್ಧಾರಕ್ಕೆ ಕಾಂಗ್ರೆಸ್ ಹೈಕಮಾಂಡ್ ಬಂದಾಗಿದೆ. ಒಂದು ವೇಳೆ ಯಾವುದೇ ಕಾರಣಕ್ಕೂ ಮುಂದುವರಿದರು ಅಚ್ಚರಿಯಿಲ್ಲ. ಮುಂದೆ ಬಿಟ್ಟುಕೊಟ್ಟರೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !