ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಕುರ್ಚಿ ಕಾಳಗ, ಬದಲಾವಣೆ ಚರ್ಚೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತ್ಯಾಗದ ಕುರಿತ ಭಾಷಣ ಗಮನ ಸೆಳೆದಿದೆ.
ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರ ತ್ಯಾಗ ಬಲಿದಾನಗಳನ್ನು ಪ್ರಸ್ತಾಪಿಸಿದರು. ತ್ಯಾಗಕ್ಕೆ ನಾವೆಲ್ಲರೂ ಸಿದ್ಧರಾಗಿರಬೇಕು ಎಂದರು.
ಅನೇಕ ಕಾಂಗ್ರೆಸ್ ನಾಯಕರು ತ್ಯಾಗ ಮಾಡಿದ್ದಾರೆ. ಸೋನಿಯಾ ಗಾಂಧಿ ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರು. ರಾಹುಲ್ ಗಾಂಧಿ ಪಕ್ಷಕ್ಕಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ. ಅದೇ ಹಾದಿಯಲ್ಲಿ ಸಾಗಲು ಪ್ರಯತ್ನಿಸಬೇಕು ಎಂದರು. ಸರ್ವಪಕ್ಷ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರ ತ್ಯಾಗದ ಪಾಠ ಕುತೂಹಲ ಮೂಡಿಸಿದೆ.