Friday, December 12, 2025

ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ: ಯತೀಂದ್ರರಿಂದ ಹೈಕಮಾಂಡ್​ ನಿಲುವು ಪುನರುಚ್ಚಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕಾರಣದಲ್ಲಿ ಪದೇ ಪದೇ ಚರ್ಚೆಗೆ ಗ್ರಾಸವಾಗುತ್ತಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಕಾಂಗ್ರೆಸ್ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಅವರು, ಪ್ರಸ್ತುತ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪಕ್ಷದ ಹೈಕಮಾಂಡ್ ಸ್ಪಷ್ಟಪಡಿಸಿದೆ ಎಂದು ಪುನರುಚ್ಚಾರ ಮಾಡಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯತೀಂದ್ರ ಅವರು, ಹೈಕಮಾಂಡ್​ನ ಈ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಒಂದೆಡೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಸಂಬಂಧದ ಯಾವುದೇ ನಿರ್ಧಾರವನ್ನು ಸಂಪೂರ್ಣವಾಗಿ ಹೈಕಮಾಂಡ್​ಗೆ ಬಿಟ್ಟಿದ್ದೇವೆ ಎಂದು ಈ ಹಿಂದೆ ಹೇಳಿಕೆ ನೀಡಿದ್ದಾರೆ. ಆದಾಗ್ಯೂ, ಎಂಎಲ್​ಸಿ ಯತೀಂದ್ರ ಅವರು ಮತ್ತೆ ಮತ್ತೆ ಇದೇ ವಿಷಯವನ್ನು ಪ್ರಸ್ತಾಪಿಸಿ, ‘ಬದಲಾವಣೆ ಇಲ್ಲ’ ಎಂಬ ಖಚಿತ ಸಂದೇಶವನ್ನು ನೀಡಿರುವುದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಹಾಗೂ ಕುತೂಹಲಕ್ಕೆ ಕಾರಣವಾಗಿದೆ.

error: Content is protected !!