Monday, October 3, 2022

Latest Posts

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ: ಮಹತ್ವದ ಹೇಳಿಕೆ ನೀಡಿದ ಬಿಎಸ್ ಯಡಿಯೂರಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದ್ದು ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಹತ್ವ ಹೇಳಿಕೆ ನೀಡಿದ್ದಾರೆ.
ಬೊಮ್ಮಾಯಿ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ರಾಜ್ಯದಲ್ಲಿ ಮೂರನೇ ಸಿಎಂ ಬರ್ತಾರೆಂದು ಕಾಂಗ್ರೆಸ್ ಮಾಡಿದ್ದ ಟ್ವೀಟ್ ಸಂಬಂಧ ಮಂತ್ರಾಲಯಕ್ಕೂ ತೆರಳುವ ಮುನ್ನ ಮಾತನಾಡಿದ ಅವರು ಸಿಎಂ ಬದಲಾವಣೆ ಕುರಿತ ಚರ್ಚೆಯಲ್ಲಿ ಯಾವುದೇ ಸತ್ಯಾಂಶ ಇಲ್ಲ. ಚುನಾವಣೆಗೆ 7-8 ತಿಂಗಳು ಇರುವಾಗ ಬದಲಾವಣೆ ಪ್ರಶ್ನೆ ಬರುವುದಿಲ್ಲ. ಮುಖ್ಯಮಂತ್ರಿ ಗಳಾಗಿ ಬೊಮ್ಮಾಯಿ ಅವ್ರೇ ಮುಂದುವರಿಯುತ್ತಾರೆ. ಅನಗತ್ಯವಾದ ಚರ್ಚೆ ಸರಿಯಲ್ಲ. ಯಾರೂ ಕೂಡ ಸಿಎಂ ಬದಲಾವಣೆ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯೂ ಇಲ್ಲ. ಅಮಿತ್ ಷಾ ನನ್ನ ಬಳಿ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ಮಾಡಿದ್ರು ಅಷ್ಟೇ. ಆದರೆ ನಾಯಕತ್ವದ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಯಾರು ಏನೇ ಹೇಳಿದ್ರು ಆ ರೀತಿಯ ಬದಲಾವಣೆಗಿಳಿಲ್ಲ ಎಂದರು.
ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳುವುದೇ ನಮ್ಮ ಉದ್ದೇಶ. ನಾನು ಈಗಾಗಲೇ ವಿಧಾನಸಭೆ ಯಲ್ಲಿ ಹೇಳಿದ್ದೇನೆ, ಯಾರೋ ಒಂದಿಬ್ಬರು ತಾವು ಮುಂದೆ ಮುಖ್ಯಮಂತ್ರಿ ಆಗ್ತೀವಿ ಅನ್ನೋ ಭ್ರಮೆ ನಲ್ಲಿದ್ದಾರೆ. ಆದರೆ ಅವರಿಗೆ ನಾವು ಅವಕಾಶ ಮಾಡಿಕೊಡುವುದಿಲ್ಲ. ನಿಶ್ಚಿತವಾಗಿ ಬಿಜೆಪಿಯವರೇ ಮುಂದಿನ ಮುಖ್ಯಮಂತ್ರಿಗಳಾಗ್ತಾರೆ. ನಾವೆಲ್ಲರೂ ಸಾಮೂಹಿಕವಾಗಿ ಪ್ರವಾಸ ಮಾಡಿ, ಅಧಿಕಾರಕ್ಕೆ ಬರಲು 135 ಸ್ಥಾನ ಗೆಲ್ತೇವೆ. ನಮಗೆ ಮೋದಿಯಂತ ನಾಯಕ ಇರೋದ್ರಿಂದ ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ವಿಶ್ವಾಸ ನಮಗೆ ಇದೆ ಎಂದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!