ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಗೆ ಕಾಂಗ್ರೆಸ್ ಪಕ್ಷದಿಂದ ಶೋಕಾಸ್ ನೊಟೀಸ್ ನೀಡಲಾಗಿದೆ.
ಸಿಎಂ ಬದಲಾವಣೆ ವಿಚಾರವಾಗಿ ಹೇಳಿಕೆಯನ್ನು ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ನೀಡಿದ್ದರು. ಹೀಗಾಗಿ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿಯಿಂದ ಶೋಕಾಸ್ ನೊಟೀಸ್ ನೀಡಲಾಗಿದೆ.
ಶಾಸಕ ಶಿವಗಂಗಾ ಬಸವರಾಜ್ ಹೇಳಿಕೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗರಂ ಆಗಿದ್ದಲ್ಲದೇ ಅವರಿಗೆ ನೊಟೀಸ್ ನೀಡುವುದಾಗಿಯೂ ತಿಳಿಸಿದ್ದರು. ಅದರಂತೆ ಇಂದು ನಿಮ್ಮ ಬಹಿರಂಗ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರವಾಗಿದೆ. ಶೋಕಾಸ್ ನೊಟೀಸ್ ಗೆ 7 ದಿನಗಳೊಳಗೆ ಉತ್ತರ ನೀಡುವಂತೆ ಸೂಚಿಸಲಾಗಿದೆ.