ಪತ್ರಕರ್ತ ಮುತಾಲಿಕ್ ದೇಸಾಯಿ ನಿಧನಕ್ಕೆ ಸಿಎಂ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು: ಹಿರಿಯ ಪತ್ರಕರ್ತ, ಬಹುಮುಖ ಪ್ರತಿಭೆ, ಟಿಎಸ್ಸಾರ್ ಪ್ರಶಸ್ತಿಗೆ ಆಯ್ಕೆಯಾಗಿದ್ದ ಮುತಾಲಿಕ ದೇಸಾಯಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮುತಾಲಿಕ್ ದೇಸಾಯಿ ಅವರದ್ದು ಸಂಘ ಜೀವತ್ವ. ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿ ಬಗ್ಗೆ ಅವರು ಅಪಾರ ಕಾಳಜಿ ಹೊಂದಿದ್ದರು. ನೂರಾರು ಜನ ಯುವಪತ್ರಕರ್ತರಿಗೆ ಮಾರ್ಗದರ್ಶಿಯಾಗಿದ್ದರು. ಅವರ ನಿಧನದಿಂದ ಕನ್ನಡ ಪತ್ರಿಕಾ ಲೋಕ ಬಡವಾಗಿದೆ ಎಂದು ಮುಖ್ಯಮಂತ್ರಿಗಳು ಸಂತಾಪ ಸೂಚಿಸಿದ್ದಾರೆ.

ಅವರ ನಿಧನದ ದುಃಖವನ್ನು ಬರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!