ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೇ ನಟ ಸಂಚಾರಿ ವಿಜಯ್ ಮೃತಪಟ್ಟಿದ್ದು, ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಸಂಚಾರಿ ವಿಜಯ್ ಅವರು ರಂಗಭೂಮಿ, ಸಿನೆಮಾ ರಂಗಗಳೆರಡರಲ್ಲೂ ತಮ್ಮ ಮನೋಜ್ಞ ಅಭಿನಯದ ಮೂಲಕ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದುರು.
ಭಗವಂತನು ಮೃತರ ಆತ್ಮಕ್ಕೆ ಶಾಂತಿಯನ್ನು ನೀಡಲಿ, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಿಎಂ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.