August 12, 2026
Wednesday, August 12, 2026
spot_img

ಕಟ್ಟುನಿಟ್ಟಿನ ಗೈಡ್‌ಲೈನ್ಸ್‌ನೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಪುನರಾರಂಭಕ್ಕೆ ಸಿಎಂ ಗ್ರೀನ್ ಸಿಗ್ನಲ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್

ಪ್ರವಾಸಿಗರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ಸ್ಥಗಿತಗೊಂಡಿದ್ದ ಜಂಗಲ್ ಸಫಾರಿ ಮತ್ತು ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳನ್ನು ಪೂರ್ಣ ಪ್ರಮಾಣದಲ್ಲಿ ತಕ್ಷಣವೇ ಪುನರಾರಂಭಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಮಹತ್ವದ ನಿರ್ದೇಶನ ನೀಡಿದ್ದಾರೆ.  

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸುರಕ್ಷತೆಗೆ ಮೊದಲ ಆದ್ಯತೆ

ಸಭೆಯಲ್ಲಿ ಅಧಿಕಾರಿಗಳು ನೀಡಿದ ಮಾಹಿತಿಯಂತೆ, ಬಂಡೀಪುರ ಮತ್ತು ನಾಗರಹೊಳೆ ಪರಿಸರ ಪ್ರವಾಸೋದ್ಯಮ ಹಾಗೂ ಸಫಾರಿ ವಲಯಗಳಲ್ಲಿ ಹುಲಿ ಮತ್ತು ಚಿರತೆಗಳ ಸಾಂದ್ರತೆ ಅತ್ಯಂತ ಹೆಚ್ಚಾಗಿದೆ. ಇದು ಮಾನವ-ವನ್ಯಜೀವಿ ಸಂಘರ್ಷದ ಪ್ರದೇಶಗಳಿಗಿಂತಲೂ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರಾಣಕ್ಕೆ ಯಾವುದೇ ಧಕ್ಕೆ ಬಾರದಂತೆ ಸಫಾರಿ ವಾಹನಗಳ ಚಲನೆ ಮತ್ತು ಮಾರ್ಗಗಳ ಮೇಲೆ ತೀವ್ರ ನಿಗಾ ಇಡಬೇಕು ಹಾಗೂ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸಿಎಂ ಸೂಚಿಸಿದರು.

ಇದನ್ನೂ ಓದಿ:

ಆರ್ಥಿಕತೆ ಮತ್ತು ಉದ್ಯೋಗ ಚೇತರಿಕೆ

ಹುಲಿ ದಾಳಿಗಳ ಹಿನ್ನೆಲೆಯಲ್ಲಿ ಕಳೆದ ನವೆಂಬರ್‌ನಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು. ಇದರಿಂದಾಗಿ ಸ್ಥಳೀಯ ಪ್ರವಾಸೋದ್ಯಮ, ರೆಸಾರ್ಟ್‌ಗಳು ಮತ್ತು ಸಣ್ಣ ವ್ಯಾಪಾರಿಗಳು ಕೋಟ್ಯಂತರ ರೂಪಾಯಿ ನಷ್ಟ ಅನುಭವಿಸಿದ್ದರು ಹಾಗೂ ಸಾವಿರಾರು ಜನರ ಉದ್ಯೋಗಕ್ಕೆ ಪೆಟ್ಟು ಬಿದ್ದಿತ್ತು. ತಜ್ಞರ ತಾಂತ್ರಿಕ ಸಮಿತಿಯ ವರದಿ ಮತ್ತು ಪರಿಸರದ ಹೊರೆ ಸಾಮರ್ಥ್ಯವನ್ನು ವೈಜ್ಞಾನಿಕವಾಗಿ ಪರಿಶೀಲಿಸಿದ ಬಳಿಕವೇ ಸರ್ಕಾರ ಈ ನಿಯಂತ್ರಿತ ಪುನರಾರಂಭದ ನಿರ್ಧಾರಕ್ಕೆ ಬಂದಿದೆ.  

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !