September 4, 2026
Friday, September 4, 2026
spot_img

ಕೃಷ್ಣಾ ನದಿಗೆ ಪೂಜೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್‌: ನದಿಗೆ ಬಾಗೀನ ಅರ್ಪಣೆ

ಹೊಸದಿಗಂತ ವರದಿ ಬಾಗಲಕೋಟೆ :

ಅಲ್ಪಸ್ವಲ್ಪ ಮಳೆಯಾಗಿ ಕೃಷ್ಣಾ ನದಿ ತುಂಬಿದ ಪರಿಣಾಮ ಘಟಪ್ರಭಾ ,ಕೃಷ್ಣಾ, ಮಲಪ್ರಭಾ ನದಿಗಳ ತ್ತಿವೇಣಿ ಸಂಗಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವುಕುಮಾರ ಪೂಜೆ ಸಲ್ಲಿಸಿ ನಮಸ್ಕರಿಸಿದರು.

ಕೂಡಲಸಂಗಮದ ಸಂಗಮನಾಥೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಕೃಷ್ಣಾ ನದಿಗೆ ಸಿಎಂ ಡಿ.ಕೆ. ಶಿವಕುಮಾರ್ ಪೂಜೆ ಸಲ್ಲಿಸಿದರು. ಬಳಿಕ ನದಿಗೆ ಆರತಿ ಬೆಳಗಿ ಬಾಗೀನ ಅರ್ಪಿಸಿದರು. ನದಿ ನೀರಿನವರೆಗೆ ರೆಡ್ ಕಾರ್ಪೆಟ್ ಹಾಕಿ ವಿಶೇಷ ಅಲಂಕಾರ ಮಾಡಲಾಗಿತ್ತು. ಹಲಗಿ ಮಜಲು ತಂಡದ ಪ್ರದರ್ಶನ ಗಮನ ಸೆಳೆಯಿತು.

ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ,ಶಾಸಕ ಆರ್.ಬಿ.ತಿಮ್ಮಾಪುರ, ಬಿ.ಬಿ.ಚಿಮ್ಮನಕಟ್ಟಿ, ಜೆ.ಟಿ.ಪಾಟೀಲ, ಉಪ ಸಭಾಪತಿ ಮಂಕಾಳ ವೈದ್ಯ, ಮಾಜಿ ಸಚಿವ ಅಜಯಕುಮಾರ ಸರನಾಯಕ, ಮಾಜಿ ಶಾಸಕ ಆನಂದ ನ್ಯಾಮಗೌಡ,ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ವೀಣಾ ಕಾಶಪ್ಪನವರ, ಮುಖಂಡ ಸಿದ್ದು ಕೊಣ್ಣೂರ,‌ಜಿಲ್ಲಾಧಿಕಾರಿ ಸಂಗಪ್ಪ ಇದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !