October 26, 2026
Monday, October 26, 2026
spot_img

ಬೆಳಗಾವಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್‌: ಬೆಳಗಾವಿ ರೈತರಿಂದ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರತೀ ಟನ್‌ ಕಬ್ಬಿಗೆ ₹5,500 ದರ ನಿಗದಿ ಮಾಡಬೇಕು ಎಂದು ಕಬ್ಬಿನ ರೈತರು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಇಂದು ಸಿಎಂ ಡಿ.ಕೆ. ಶಿವಕುಮಾರ್‌ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಇಲ್ಲಿ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಮಹತ್ವದ ಸಭೆ ನಡೆಸಲಿದ್ದಾರೆ.

ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಸಭೆ ನಡೆಯಲಿದೆ. ದರ ನಿಗದಿಗಾಗಿ ರೈತರು ಪಟ್ಟು ಹಿಡಿದಿದ್ದು, ಸಿಎಂ ಸ್ಪಂದನೆ ನೀಡದಿದ್ದರೆ ನಾಳೆ ಕರ್ನಾಟಕ ಬಂದ್‌ ಮಾಡುವುದಾಗಿ ರೈತರು ಹೇಳಿದ್ದಾರೆ. ಇನ್ನು ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರು ರಾಜ್ಯ ಹೆದ್ದಾರಿ ತಡೆದು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಭಾನುವಾರ ನಡೆದ ಕಿತ್ತೂರು ಉತ್ಸವದ ಸಮಾರೋಪದಲ್ಲಿ ಸಿಎಂ ಭಾಗಿಯಾಗಿದ್ದು, ರಾತ್ರಿ ಬೆಳಗಾವಿಯಲ್ಲಿಯೇ ತಂಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಕಾರ್ಖಾನೆ ಮಾಲೀಕರೊಂದಿಗೆ, ಮಧ್ಯಾಹ್ನ 3.30ಕ್ಕೆ ರೈತ ಮುಖಂಡರೊಂದಿಗೆ ಸಭೆ ನಿಗದಿಯಾಗಿದೆ.

Must Read