November 9, 2026
Monday, November 9, 2026
spot_img

ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ಸಿಎಂ ಡಿ.ಕೆ. ಶಿವಕುಮಾರ್‌ ಭೇಟಿ: ಕಾರಣ ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಡಿ.ಕೆ. ಶಿವಕುಮಾರ್‌ ಭೇಟಿ ನೀಡಿದ್ದಾರೆ. ಕಾವೇರಿ ನಿವಾಸಕ್ಕೆ ಡಿಕೆಶಿ ಅವರು ಭೇಟಿ ನೀಡಿದ್ದು, ದೀಪಾವಳಿ ಹಬ್ಬದ ಶುಭಕೋರಿದ್ದಾರೆ.

ಸ್ಟಿಂಗ್‌ ಆಪರೇಷನ್‌ ಪ್ರಕರಣ, ದೆಹಲಿಗೆ ತೆರಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವ್ರು ಹೈಕಮಾಂಡ್​ ನಾಯಕರನ್ನ ಭೇಟಿ ನೀಡಿ ರಾಜ್ಯದಲ್ಲಿ ನಡೆಯುತ್ತಿರುವ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಿದ್ದರು. ಈ ಎಲ್ಲ ಬೆಳವಣಿಗೆಗೆಗಳ ಮಧ್ಯೆ ಇಬ್ಬರು ನಾಯಕರ ಭೇಟಿ ಬಗ್ಗೆ ಜನರಿಗೆ ಕುತೂಹಲ ಮೂಡಿದೆ.

ಡಿಕೆ ಶಿವಕುಮಾರ್‌ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡದೇ ಬಹಳಷ್ಟು ಸಮಯವಾಗಿತ್ತು. ಕುಶಲೋಪರಿ ಹಾಗೂ ಹಬ್ಬದ ಶುಭಾಷಯಗಳನ್ನು ತಿಳಿಸಲು ಮಾತ್ರ ತೆರಳಿದ್ದಾರೆ. ಇನ್ಯಾವುದೇ ರಾಜಕೀಯ ವಿಷಯಗಳ ಬಗ್ಗೆ ಚರ್ಚೆ ಇಲ್ಲ ಎನ್ನಲಾಗಿದೆ.

Must Read