ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ್ದು, ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮೈಸೂರು ಅರಮನೆಗೆ ಭೇಟಿ ನೀಡುವ ಮುನ್ನವೇ ಸಿಎಂ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದಾರೆ. ಸುತ್ತೂರು ಶ್ರೀಗಳನ್ನು ಭೇಟಿಯಾಗಿ, ಆಶೀರ್ವಾದ ಪಡೆದಿದ್ದಾರೆ.
ಸುತ್ತೂರು ಮಠದ ಆವರಣದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಠದಲ್ಲಿ ನಡೆದ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ ಅವರು, ಪೂರ್ಣಾಹುತಿ ನೆರವೇರಿಸಿದರು. ಬಳಿಕ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು.
ಚಾಮುಂಡಿ ಬೆಟ್ಟಕ್ಕೆ ಹತ್ತಲು ಸಾಧ್ಯವಾಗದವರು ಸುತ್ತೂರು ಮಠಕ್ಕೆ ಭೇಟಿ ನೀಡಿ ಒಳಭಾಗದಲ್ಲಿರುವ ಚಾಮುಂಡೇಶ್ವರಿ ದೇವಿಯ ದರುಶನ ಪಡೆಯುತ್ತಿದ್ದರು ಎನ್ನುವ ಪ್ರತೀತಿ ಇದೆ. ಇನ್ನೂ ಸಿಎಂ ಪೂಜೆ ಸಲ್ಲಿಸುವ ಸಂದರ್ಭದಲ್ಲಿ ಸಚಿವರಾದ ನರೇಂದ್ರಸ್ವಾಮಿ, ಬಸವರಾಜು ಹಾಗೂ ಬಾಲಕೃಷ್ಣ ಸೇರಿದಂತೆ ಹಲವು ಶಾಸಕರು ಉಪಸ್ಥಿತರಿದ್ದರು. ಸಚಿವರು ಮತ್ತು ಶಾಸಕರು ಮುಖ್ಯಮಂತ್ರಿಯೊಂದಿಗೆ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದರು.



