ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಕಾಂಗ್ರೆಸ್ ಇಂದು ಸರ್ಕಾರ ರಚಿಸಲು ಮುಂದಾಗಿದೆ. ಇಂದು ಕಂಠೀರವ ಕ್ರೀಡಾಂಗಣದಲ್ಲಿ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದ್ದು, ನಗರದೆಲ್ಲೆಡೆ ಕೈ ನಾಯಕರಿರುವ ಬ್ಯಾನರ್‌ಗಳು ರಾರಾಜಿಸುತ್ತಿವೆ.
ಕರ್ನಾಟಕ ಸಿಎಂ ನಿಯೋಜಿತ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ, ಹಾಲಿ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಇತರ ನಾಯಕರನ್ನು ಹೊಂದಿರುವ ಬ್ಯಾನರ್‌ಗಳು ಬೆಂಗಳೂರಿನಲ್ಲಿ ಕಂಡುಬಂದಿವೆ.
ಸಮಾರಂಭ ನಡೆಯಲಿರುವ ಕಂಠೀರವ ಸ್ಟೇಡಿಯಂ ಮಾತ್ರ ಮದುವಣಗಿತ್ತಿಯಂತೆ ಅಲಂಕಾರಗೊಂಡಿದೆ. ಎಲ್ಲಿ ನೋಡಿದ್ರೂ ಸಿದ್ದರಾಮಯ್ಯ, ಡಿಕೆಶಿ ಫೋಟೋಗಳಿರುವ ಫ್ಲೆಕ್ಸ್‌ಗಳದ್ದೇ ಹವಾ ಆಗಿದೆ.