ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದಲ್ಲಿ ಪವರ್ ಶೇರಿಂಗ್ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಇಂದು ಗುರುವಾರ ಅಪರಾಹ್ನ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಪ್ರತ್ಯೇಕವಾಗಿ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ.
ಇತ್ತೀಚಿಗಷ್ಟೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ಹೋಗಿ ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಗಳು ಮತ್ತು ಯೋಜನೆಗಳ ಬಗ್ಗೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ರಾಜ್ಯದಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಕುರಿತು ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಅವರ ಬಳಿ ಚರ್ಚಿಸಿ ಬಂದಿದ್ದರು.
ಇದೀಗ ಮತ್ತೆ ಇವತ್ತು ದೆಹಲಿಗೆ ತೆರಳಲಿದ್ದಾರೆ. ಕಳೆದ ಬಾರಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಭೇಟಿಗೆ ಕಾಲಾವಕಾಶ ಸಿಗದೇ ಸಿಎಂ ವಾಪಸ್ ಆಗಿದ್ದರು. ಇದೀಗ ಇವತ್ತು ಮತ್ತೆ ಸಿಎಂ ದೆಹಲಿಗೆ ತೆರಳುತ್ತಿದ್ದಾರೆ. ಡಿಸಿಎಂ ಕೂಡಾ ಹೈ ನಾಯಕರ ಭೇಟಿಗೆ ತೆರಳಲಿದ್ದಾರೆ. ಈ ಬಾರಿಯಾದ್ರೂ ಸಿದ್ದು-ಡಿಕೆ ರಾಹುಲ್ ಗಾಂಧಿಯನ್ನು ಭೇಟಿಯಾಗುತ್ತಾರಾ ಎಂಬ ಕುತೂಹಲ ಮೂಡಿದೆ.