ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ`ದಿವಾಳಿ ಮಾಡೆಲ್ ಆಫ್ ಕರ್ನಾಟಕ’ ಬಿರುದನ್ನು ನಾವು ನೀಡುತ್ತಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಬಿಜೆಪಿ ನಗರ ಕಾರ್ಯಾಲಯ ಬಾವುರಾವ್ ದೇಶಪಾಂಡೆ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ರಾಜ್ಯ ಸರ್ಕಾರ ದಿವಾಳಿಯಾಗಿದೆ. ಸಾಲ ಪಡೆದು ಸಂಬಳ ಕೊಡುವಂಥ ಸ್ಥಿತಿ ಬಂದಿದೆ. ನಮ್ಮ ಡಿ.ಕೆ.ಶಿವಕುಮಾರಣ್ಣ ನಿನ್ನೆ ಇದನ್ನು ಸರಿಯಾಗಿ ಹೇಳಿದ್ದಾರೆ. ತಿಂಗಳಿಗೊಮ್ಮೆ 2 ಸಾವಿರ ಹಣ ಕೊಡಲು ನಿಮ್ಮಪ್ಪನ ಮನೆ ಗಂಟಾ ಎಂದು ಕೇಳಿದ್ದಾರೆ. ತಿಂಗಳಿಗೊಮ್ಮೆ 2 ಸಾವಿರ ಫಟಾಫಟ್ ಹಣ ಕೊಡುವುದಾಗಿ ರಾಹುಲ್ ಗಾಂಧಿ ಹೇಳಿದ್ದರು. ಇಲ್ಲಿ ಶಿವಕುಮಾರ್ ಕಟಾಕಟ್, ಯಾವಾಗ ಹಣ ಬರುತ್ತೋ ಆಗ ದುಡ್ಡು ಕೊಡುವುದಾಗಿ ಹೇಳಿದ್ದಾರೆ ಎಂದು ಗಮನ ಸೆಳೆದರು.
ಯಾವ ಸಾಧನೆಗೆ ಈ ಸಂಭ್ರಮಾಚರಣೆ?
ಮುಖ್ಯಮಂತ್ರಿಗಳೇ.ಯಾವ ಸಾಧನೆಗಾಗಿ ಈ 2 ವರ್ಷದ ಸಂಭ್ರಮಾಚರಣೆ ಮಾಡಿದ್ದೀರಿ? ಏನು ಕಡಿದು ಕಟ್ಟೆ ಹಾಕಿದ್ದೀರಿ? ಎಂದು ಕೇಳಿದರು. ಹಾಲಿನ ದರ ಏರಿಸಿದ್ದೀರಿ. ನೀರು, ವಿದ್ಯುತ್, ಪೆಟ್ರೋಲ್, ಡೀಸೆಲ್, ಆಸ್ತಿ ತೆರಿಗೆ ಇವೆಲ್ಲವನ್ನೂ ಏರಿಸಿದ್ದೀರಿ. ದರ ಏರಿಸಿದ ಪರಿಣಾಮವಾಗಿ ಜನರು ಕಷ್ಟದಲ್ಲಿರುವಾಗ, ಸಮಾವೇಶ ಮಾಡಬೇಕೆಂದು ನಿಮಗೆ ಯಾಕೆ ಅನ್ನಿಸಿದೆ? ಎಂಬ ಪ್ರಶ್ನೆಯನ್ನು ಮುಂದಿಟ್ಟರು.