October 11, 2026
Sunday, October 11, 2026
spot_img

ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್‌ ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಮನಗರದ ಶಾಸಕ ಇಕ್ಬಾಲ್‌ ಹುಸೇನ್‌ ಎದೆನೋವಿನಿಂದ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಮುಖ್ಯಮಂತ್ರಿಯವರೊಂದಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕೂಡ ಆಸ್ಪತ್ರೆಗೆ ಆಗಮಿಸಿ ಶಾಸಕರ ಆರೋಗ್ಯ ವಿಚಾರಿಸಿದರು. ಕೆಲವು ದಿನಗಳಿಂದ ಎದೆನೋವಿನಿಂದ ಬಳಲುತ್ತಿದ್ದ ಇಕ್ಬಾಲ್‌ ಹುಸೇನ್‌, ಬಿಪಿಯಲ್ಲಿ ಏರಿಳಿತ ಆದ ಕಾರಣ ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪರೀಕ್ಷೆ ಮಾಡಿದ್ದು, ಸ್ಟಂಟ್‌ ಅವಳಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇಕ್ಬಾಲ್ ಹುಸೇನ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ. ಶ್ರೀನಿವಾಸ್ ಮಾತನಾಡಿ, ಆಂಜಿಯೋಗ್ರಾಂ ವೇಳೆ ರಕ್ತನಾಳಗಳಲ್ಲಿ ಬ್ಲಾಕ್ ಇರುವುದನ್ನು ಪತ್ತೆ ಮಾಡಲಾಗಿದೆ. ಅಗತ್ಯ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Must Read