ಸರ್ಕಾರಿ ಶಾಲೆಗಳ ದತ್ತು ಸ್ವೀಕಾರಕ್ಕೆ ಖಾಸಗಿ ಸಂಸ್ಥೆಗಳಿಗೆ ಸಿಎಂ ಡಿಕೆಶಿ ಕರೆ: ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ಗೆ ಚಾಲನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಮತ್ತು ಹಳ್ಳಿಗಳಿಂದ ನಗರಗಳಿಗೆ ವಲಸೆ ಹೋಗುವುದನ್ನು ತಡೆಗಟ್ಟಲು ರಾಜ್ಯದ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಗ್ರಾಮೀಣ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅವುಗಳ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ಪ್ರತಿನಿಧಿಗಳ ಸಭೆಯಲ್ಲಿ ಸರ್ಕಾರದ ನೂತನ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. … Continue reading ಸರ್ಕಾರಿ ಶಾಲೆಗಳ ದತ್ತು ಸ್ವೀಕಾರಕ್ಕೆ ಖಾಸಗಿ ಸಂಸ್ಥೆಗಳಿಗೆ ಸಿಎಂ ಡಿಕೆಶಿ ಕರೆ: ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ಗೆ ಚಾಲನೆ