June 4, 2026
Thursday, June 4, 2026
spot_img

ಸಿಎಂ ಆದ ಕೂಡಲೇ ಬೆಂಗಳೂರಿನ ಮುಖ್ಯ ಸಮಸ್ಯೆ ಕಡೆ ಗಮನಹರಿಸಿದ ಡಿಕೆಶಿ, 2 ಸಾವಿರ ಕೋಟಿ ಅನುದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್‌ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.

ಬೆಂಗಳೂರು ನಗರದ ರಸ್ತೆಗಳ ಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಡಾಂಬರೀಕರಣಕ್ಕೆ ಎರಡು ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.

ಬೆಂಗಳೂರಿನ ರಸ್ತೆಗಳು ಹದಗೆಟ್ಟಿವೆ. ಇನ್ನೇನು ಮಳೆ ಆರಂಭವಾದರೆ ರಸ್ತೆಗಳಲ್ಲಿ ಓಡಾಟವೂ ಕಷ್ಟವಾಗಬಹುದು. ಶೀಘ್ರದಲ್ಲೇ ಡಾಂಬರೀಕರಣ ಆರಂಭವಾಗಲಿದೆ ಎಂದಿದ್ದಾರೆ. ಇಷ್ಟೇ ಅಲ್ಲದೇ ಬೆಂಗಳೂರಿನ ಕಸದ ಸಮಸ್ಯೆಯ ಬಗ್ಗೆ, ರೈತರ ಸಮಸ್ಯೆ ಬಗ್ಗೆ ಆದ್ಯತೆ ನೀಡುತ್ತೇನೆ. ಎಲ್ಲರನ್ನೂ ಕರೆದು ಮಾತನಾಡುತ್ತೇನೆ ಎಂದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !