October 9, 2026
Friday, October 9, 2026
spot_img

ಸಿಎಂ ಡಿಕೆ ಶಿವಕುಮಾರ್‌ ಆರೋಗ್ಯದಲ್ಲಿ ಏರುಪೇರು: ವಿಧಾನಸೌಧದಲ್ಲೇ ಚಿಕಿತ್ಸೆ ನೀಡಿದ ವೈದ್ಯರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಲಸದ ಒತ್ತಡ ಹಾಗೂ ಪ್ರಯಾಣದ ದಣಿವಿನಿಂದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆರೋಗ್ಯದಲ್ಲಿ ಮಂಗಳವಾರ ವ್ಯತ್ಯಾಸ ಕಂಡುಬಂದಿದ್ದು, ವಿಧಾನಸೌಧದಲ್ಲೇ ವೈದ್ಯರು ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದಾರೆ.

ಸದ್ಯ ಮುಖ್ಯಮಂತ್ರಿಗಳ ಆರೋಗ್ಯ ಸ್ಥಿರವಾಗಿದ್ದು, ರಕ್ತದೊತ್ತಡ ಸಹಜ ಸ್ಥಿತಿಗೆ ಮರಳಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:

ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮಧ್ಯಾಹ್ನದ ವೇಳೆ ಕೆಲಸದಲ್ಲಿ ನಿರತರಾಗಿದ್ದಾಗ ಡಿ.ಕೆ. ಶಿವಕುಮಾರ್ ಅವರಿಗೆ ಅಲ್ಪ ಸುಸ್ತು ಕಾಣಿಸಿಕೊಂಡಿತ್ತು. ತಕ್ಷಣವೇ ವಿಧಾನಸೌಧದ ವೈದ್ಯರ ತಂಡ ಸಿಎಂ ಕಚೇರಿಗೆ ಆಗಮಿಸಿ ಆರೋಗ್ಯ ತಪಾಸಣೆ ನಡೆಸಿತು.

ಪ್ರಾಥಮಿಕ ತಪಾಸಣೆಯಲ್ಲಿ ಮುಖ್ಯಮಂತ್ರಿಗಳ ರಕ್ತದೊತ್ತಡದಲ್ಲಿ ಏರುಪೇರು ಕಂಡುಬಂದಿದೆ. ವೈದ್ಯರು ಅಗತ್ಯ ಚಿಕಿತ್ಸೆ ನೀಡಿ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ. ಕೆಲಕಾಲ ವಿಶ್ರಾಂತಿ ಪಡೆದ ಬಳಿಕ ರಕ್ತದೊತ್ತಡ ಸಹಜ ಸ್ಥಿತಿಗೆ ಮರಳಿದೆ ಎಂದು ಮೂಲಗಳು ತಿಳಿಸಿವೆ.

Must Read