ಕಾಂಗ್ರೆಸ್‌ನಲ್ಲಿ ಶುರುವಾಯ್ತು ಸಿಎಂ ಫೈಟ್:‌ ಮುಖ್ಯಮಂತ್ರಿ ಗಾದಿಗಾಗಿ ನಾಯಕರ ಪೈಪೋಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತ ಪಡೆದು ಸರ್ಕಾರ ರಚೆನೆಗೆ ಸಿದ್ಧವಾಗಿದೆ. ಅದರಂತೆ ಇಂದು ರಾಜ್ಯದ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಗದಂತಾಗಿದ್ದು, ತಮ್ಮ ತಮ್ಮಲ್ಲೇ ಫೈಟ್‌ ಶುರುವಾಗಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌, ಪ್ರಿಯಾಂಕ್‌ ಖರ್ಗೆ ಸದ್ಯ ಸಿಎಂ ರೇಸ್‌ನಲ್ಲಿದ್ದು, ಫೈನಲ್‌ ಆಗಿ ಸಿಎಂ ಅಭ್ಯರ್ಥಿ ಯಾರೆಂಬುದಕ್ಕೆ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲ.

ಹೀಗಿರುವಾಗ ಬೆಂಬಲಿಗರು ತಮ್ಮ ತಮ್ಮ ನಾಯಕನೇ ಸಿಎಂ ಎಂದು ಈಗಾಗಲೇ ಎಲ್ಲೆಡೆ ಪೋಸ್ಟರ್‌ಗಳನ್ನು ಹಾಕಿ ತೀರ್ಮಾನ ಮಾಡಿದಂತಿದೆ.

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಬೆಂಬಲಿಗರು ಬೆಂಗಳೂರಿನಲ್ಲಿರುವ ಅವರ ನಿವಾಸದ ಹೊರಗೆ ಪೋಸ್ಟರ್ ಹಾಕಿದ್ದು, ಡಿಕೆ ಶಿವಕುಮಾರ್ ಅವರನ್ನು ರಾಜ್ಯದ “ಸಿಎಂ” ಎಂದು ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ.

ಅದರಂತೆ ಸಿದ್ದರಾಮಯ್ಯ ಬೆಂಬಲಿಗರು ಕೂಡ ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯರನ್ನು ಸಿಎಂ ಮಾಡಬೇಕು ಎಂದು ಬಿಗಿ ಪಟ್ಟು ಹಿಡಿದಿದ್ದಾರೆ. ನಿನ್ನೆ ಯತೀಂದ್ರ ಸಿದ್ದರಾಮಯ್ಯ ಕೂಡ ಮತ್ತೆ ನಮ್ಮ ತಂದೆ ಮುಖ್ಯಮಂತ್ರಿ ಆಗಬೇಕು ಎಂಬ ಮಾತನ್ನು ಮಾಧ್ಯಮಗಳ ಮುಂದೆ ಹೇಳಿದ್ದರು.

ಈ ನಡುವೆ ಪ್ರಿಯಾಂಕ್‌ ಖರ್ಗೆ ಬೆಂಬಲಿಗರು ಸಹ ʻನಮ್ಮ ಸಿಎಂ ಪ್ರಿಯಾಂಕ್ ಖರ್ಗೆʼ ಎಂಬ ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಚಿತ್ತಾರಪುರದಲ್ಲಿ ಹ್ಯಾಟ್ರಿಕ್​​ ಗೆಲುವು ಸಾಧಿಸಿದ ಪ್ರಿಯಾಂಕ್​ ಖರ್ಗೆಗೆ ಮುಖ್ಯಮಂತ್ರಿ ಮಾಡಬೇಕೆಂದು ಬೆಂಬಲಿಗರು ಟ್ರೆಂಡ್​ ಸೃಷ್ಟಿ ಮಾಡುತ್ತಿದ್ದಾರೆ. ಅಪ್ಪನ ಕನಸಲ್ಲ ಕೋಟ್ಯಾಂತರ ಕನ್ನಡಿಗರ ಕನಸು, ಅನ್ನೋ ಪೋಸ್ಟರ್​​ಗಳು ವೈರಲ್ ಆಗುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!