ಧರ್ಮಸ್ಥಳಕ್ಕೆ ಹೊರಟ ಬಸ್​ನಲ್ಲಿ ಉಚಿತ ಟಿಕೆಟ್​ ನೀಡಿದ ಸಿಎಂ: ರಾಜ್ಯಾದ್ಯಂತ ಉಚಿತ ಬಸ್​ ಪ್ರಯಾಣ ಆರಂಭ

ಹೊಸದಿಂಗತ ಡಿಜಿಟಲ್‌ ಡೆಸ್ಕ್:‌

ರಾಜ್ಯಾದ್ಯಂತ ಇಂದು ಮಧ್ಯಾಹ್ನದಿಂದ ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣ ಸೌಲಭ್ಯ ಆರಂಭವಾಗಿದೆ. ವಿಧಾನಸೌಧದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಬಳಿಕ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಜೊತೆಗೆ ಬಿಎಂಟಿಸಿ ಬಸ್​ನಲ್ಲಿ ಮೆಜೆಸ್ಟಿಕ್​ಗೆ ಪ್ರಯಾಣ ಬೆಳೆಸಿದರು. ಬಸ್​ ಮೆಜಿಸ್ಟಿಕ್ ತಲುಪಿದ ಬಳಿಕ ​ಧರ್ಮಸ್ಥಳಕ್ಕೆ ಹೊರಡುವ ಮೊದಲ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಸಿಎಂ ಸಿದ್ದರಾಮಯ್ಯ ಟಿಕೆಟ್ ವಿತರಣೆ ಮಾಡುವ ಮೂಲಕ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ ನೀಡಿದರು. ಬಳಿಕ ಮೆಜೆಸ್ಟಿಕ್​ನಿಂದ ಹೊರಟ ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​ ಮತ್ತು ಸಾರಿಗೆ ಸಚಿವರು ಹಸಿರು ನಿಶಾನೆ ತೋರಿದರು.

ಇದಕ್ಕೂ ಮುನ್ನ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ದೀಪ ಬೆಳಗುವುದರ ಮೂಲಕ ಶಕ್ತಿ ಯೋಜನೆ ಉದ್ಘಾಟಿಸಿದರು. ಬಳಿಕ ಶಕ್ತಿ ಯೋಜನೆಯ ಲೋಗೋ ಮತ್ತು ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಬಿಡುಗಡೆ ಮಾಡಿದರು. ಇದೇ ವೇಳೆ ಸಾಂಕೇತಿಕವಾಗಿ ಐದು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಡಿಸಿಎಂ ಡಿ. ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಸಚಿವರಾದ ಕೆ. ಜೆ. ಜಾರ್ಜ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕರಾದ ರಿಜ್ವಾನ್ ಅರ್ಷದ್, ಗೋವಿಂದರಾಜ್, ಬಿ ಕೆ ಹರಿಪಸ್ರಾದ್, ಯು. ಬಿ. ವೆಂಕಟೇಶ್, ನಾಗರಾಜ್ ಯಾದವ್ ಹಾಗೂ ಎ. ಸಿ. ವೆಂಕಟೇಶ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!