ಹೊಸದಿಗಂತ ಡಿಜಿಟಲ್ ಡೆಸ್ಕ್:
ತೀವ್ರ ಮಂಡಿ ನೋವಿನಿಂದ ಶಸ್ತ್ರಚಿಕಿತ್ಸೆಗೊಳಗಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಬೊಮ್ಮಾಯಿಯವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಇಂದು ಬೆಳಗ್ಗೆ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೊರ್ಟಿಸ್ ಆಸ್ಪತ್ರೆಗೆ ತೆರಳಿ ಯೋಗಕ್ಷೇಮ ವಿಚಾರಿಸಿದರು. ಆದಷ್ಟು ಬೇಗ ಗುಣಮುಖರಾಗುವಂತೆ ಹಾರೈಸಿದರು. ಈ ಸಂದರ್ಭದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಕೂಡ ಸಾಥ್ ನೀಡಿದರು.
ಅತಿಯಾದ ಮಂಡಿ ನೋವಿನಿಂದ ನರಳುತ್ತಿದ್ದ ಬೊಮ್ಮಾಯಿ ಈ ಹಿಂದೆ ನಾಟಿ ವೈದ್ಯ ಚಿಕಿತ್ಸೆ ಕೂ ಪಡೆದಿದ್ದರು. ಯಾವುದೇ ಗುಣಮುಖ ಕಂಡುಬರದ ಕಾರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದಾರೆ.