ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಎಂ.ಇಬ್ರಾಹಿಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ಚುನಾವಣೆಯಲ್ಲಿ ಜೆಡಿಎಸ್​ಗೆ ಸೋಲು ಹಿನ್ನೆಲೆ ನೈತಿಕ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬುಧವಾರ ಸಿ.ಎಂ.ಇಬ್ರಾಹಿಂ (CM Ibrahim) ರಾಜೀನಾಮೆ ನೀಡಿದ್ದಾರೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವೆಗೌಡ್ರು ಹಿರಿಯರು, ಮುಖಂಡರು ಎಲ್ಲರನ್ನ ಕರೆದಿದ್ದಾರೆ. ಫಲಿತಾಂಶ ಬಂದ ಮರುದಿನ ಸೋಲಿನ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ‌ ಸಲ್ಲಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್‌ನಲ್ಲಿದ್ದರೆ ಮಂತ್ರಿಯಾಗುತ್ತಿದ್ರಿ ಎಂಬ ಪ್ರಶ್ನೆಗೆ ಉತ್ತರಿಸಿ, ಗೌರವ ಇಲ್ಲದ ಕಡೆ ಸ್ಥಾನಕ್ಕೆ ಹೋಗಲ್ಲ, ಮಾನಕ್ಕೆ ಹೋಗುತ್ತೇವೆ. ಯು.ಟಿ.ಖಾದರ್‌ನ ಡಿಸಿಎಂ ಮಾಡಬಹುದಿತ್ತಲ್ಲ. ಈಗ ಅವರು ಎದ್ದೇಳುವ ಹಾಗೂ ಇಲ್ಲ, ಮಾತನಾಡುವ ಹಾಗೂ ಇಲ್ಲ. ಯು‌.ಟಿ.ಖಾದರ್ ಸ್ಪೀಕರ್ ಮಾಡಿದ ಕಾಂಗ್ರೆಸ್ ನಡೆಗೆ ಟೀಕೆ ಮಾಡಿದರು.

ಬಿಜೆಪಿ ವಿರೋಧಿ ಅಲೆ ಲಾಭ ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದರೂ ನಾವು ರಾಜ್ಯದಲ್ಲಿ 60 ಲಕ್ಷ ಮತ ಪಡೆದಿದ್ದೇವೆ. ಈ ಸರ್ಕಾರದ ಮೂರು ತಿಂಗಳ ಹನಿಮೂನ್ ಪಿರ್ಯಾಡ್ ನೋಡುತ್ತೇವೆ. ನಮ್ಮಲ್ಲಿ ಮತ ಪರಿವರ್ತನೆಗಾಗಿ ಸಿದ್ದತೆ ಮಾಡಿಕೊಳ್ಳುವಲ್ಲಿ ವಿಫಲವಾಗಿದ್ದೇವೆ. ಕೊನೆಯ ನಾಲ್ಕು ದಿನದ ತಂತ್ರಗಾರಿಕೆಯಲ್ಲಿ ವಿಫಲವಾಗಿದ್ದೇವೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!