ಅಧಿಕಾರದ ದುರಾಸೆಯಿಂದ ಸಿಎಂ ಇಬ್ರಾಹಿಂ ಜೆಡಿಎಸ್ ಸೇರ್ಪಡೆ: ಸಿದ್ದರಾಮಯ್ಯ ಕಿಡಿ

ಹೊಸದಿಗಂತ ವರದಿ, ಮದ್ದೂರು:

ಅಧಿಕಾರದ ದುರಾಸೆಯಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಸಿ.ಎಂ. ಇಬ್ರಾಹಿಂ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ಪಟ್ಟಣದ ಹೊರ ವಲಯದ ಶ್ರೀ ಬಾಲಾಜಿ ಕಲ್ಯಾಣ ಮಂಟಪದಲ್ಲಿ ನಡೆದ ವಿವಾಹ ಕಾರ‌್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಇಬ್ರಾಹಿಂ ಅವರಿಗೆ ಕಾಂಗ್ರೆಸ್ ಪಕ್ಷ ಎಲ್ಲವನ್ನೂ ಕೊಟ್ಟಿದೆ. ಭದ್ರಾವತಿಯ ಕ್ಷೇತ್ರದ ಹಾಲಿ ಶಾಸಕ ಸಂಗಮೇಶ್‌ಗೆ ಟಿಕೆಟ್ ತಪ್ಪಿಸಿ ಇಬ್ರಾಹಿಂಗೆ ಟಿಕೆಟ್ ಕೊಟ್ಟಿದ್ದರು. ಚುನಾವಣೆಯಲ್ಲಿ ಸೋತ ನಂತರ ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ಮಾಡಿದ್ದಲ್ಲದೆ, ಎರಡು ಬಾರಿ ಎಂಎಲ್‌ಸಿ ಮಾಡಿರುವುದು ಕಾಂಗ್ರೆಸ್ ಪಕ್ಷ. ಆದರೂ ಆತ ಪಕ್ಷ ತೊರೆದು ಹೋಗುತ್ತಿದ್ದಾನೆ. ನಾನೂ ಸಹ ಕಾಂಗ್ರೆಸ್ ತೊರೆಯುವಂತೆ ದೂರವಾಣಿ ಮೂಲಕ ಹೇಳಿದ್ದಾನೆ. ವಿರೋಧ ಪಕ್ಷದ ಸ್ಥಾನ ಸಿಗಲಿಲ್ಲ ಎಂಬ ಉದ್ದೇಶದಿಂದ ಕಾಂಗ್ರೆಸ್ ತೊರೆಯುತ್ತಿದ್ದಾನೆ ಎಂದು ತಿಳಿಸಿದರು.
ರಾಜಕೀಯದಲ್ಲಿ ಯಾವುದೇ ಮನುಷ್ಯನಿಗೆ ಆಸೆ ಇರಬೇಕು. ದುರಾಸೆ ಇರಬಾರದು. ದುರಾಸೆಯಿಂದ ಅಧಿಕಾರಕ್ಕಾಗಿ ಕಾಂಗ್ರೆಸ್ ಬಿಟ್ಟು ಹೋಗುತ್ತಿದ್ದಾರೆ. ಇಬ್ರಾಹಿಂ ಕಾಂಗ್ರೆಸ್ ಬಿಟ್ಟು ಹೋಗಿದ್ದಾರೆ. ಹಲವಾರು ಮಂದಿ ಪಕ್ಷಕ್ಕೆ ಸೇರುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಸಿದ್ದರಾಮಯ್ಯ ಆತ್ಮವಿಶ್ವಾಸದ ಮಾತುಗಳನ್ನಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!