ಜೆಡಿಎಸ್​​ ಪಕ್ಷದಿಂದ ಸಿಎಂ ಇಬ್ರಾಹಿಂ ಅಮಾನತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಜೆಡಿಎಸ್​​ ಪಕ್ಷದಿಂದ ಸಿಎಂ ಇಬ್ರಾಹಿಂ (CM Ibrahim) ಅವರನ್ನು ಅಮಾನತುಗೊಳಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​​ಡಿ ದೇವೇಗೌಡ (HD Deve Gowda) ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ರಾಜ್ಯ ಘಟಕದ ಪ್ರಸ್ತುತ ಕಾರ್ಯಕಾರಿ ಸಮಿತಿಯು ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿರುವುದಿಲ್ಲ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕೈಗೊಂಡಿರುವುದಿಲ್ಲ. ಇದು ಮತ್ತು ಇನ್ನೂ ಕೆಲವು ಕಾರಣಗಳಿಗಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಆದೇಶದಲ್ಲಿ ಅವರು ತಿಳಿಸಿದ್ದಾರೆ.

ಪಕ್ಷದ ಹಿತದೃಷ್ಟಿಯಿಂದ ಮತ್ತು ಪಕ್ಷವನ್ನು ಸಂಘಟನೆ ಮಾಡಲು, ಬಲವರ್ಧಿಸಲು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಜತೆ ಮೈತ್ರಿ/ಹೊಂದಾಣಿಕೆ ಮಾಡಿಕೊಳ್ಳಬೇಕೆಂದು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ. ಈ ಹೊಂದಾಣಿಕ ಬಗ್ಗೆ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಲು ಪಕ್ಷದ ರಾಷ್ಟ್ರಾಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರಿಗೆ ಅಧಿಕಾರ ನೀಡಲು ತೀರ್ಮಾನಿಸಲಾಗಿದೆ. ಈ ವಿಚಾರವಾಗಿ ನಡೆದ ಸಭೆಗಳಲ್ಲಿ ಸಿಎಂ ಇಬ್ರಾಹಿಂ ಅವರು ಉಪಸ್ಥಿತರಿದ್ದು ಚರ್ಚೆಯಲ್ಲಿ ಮತ್ತು ತೀರ್ಮಾನದಲ್ಲಿ ಪಾಲುದಾರರಾಗಿದ್ದರು. ತದನಂತರ ಈ ತೀರ್ಮಾನದ ವಿರುದ್ಧ ವಿರೋಧಭಾಸ ಹೇಳಿಕೆ ನೀಡುತ್ತಿರುವುದಾಗಿ ವರದಿಯಾಗಿದೆ. ಈ ಕಾರಣಗಳಿಗಾಗಿ ರಾಜ್ಯಾಧ್ಯಕ್ಷರನ್ನೊಳಗೊಂಡ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಜೆಡಿಎಸ್ ಸಂವಿಧಾನದ ಸೆಕ್ಷನ್ 10ರ ಅನ್ವಯ ನವೆಂಬರ್ 19ರಿಂದ ಅನ್ವಯವಾಗುವಂತೆ ವಿಸರ್ಜನೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಆದೇಶದಲ್ಲಿ ದೇವೇಗೌಡರು ತಿಳಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!