ಹೊಸದಿಗಂತ ವರದಿ ವಿಜಯಪುರ:
ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿಯ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಲೋಕಾರ್ಪಣೆ, ನಗರ ಮತಕ್ಷೇತ್ರದ ವಿವಿಧ ಇಲಾಖೆ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದರು.
ಇಲ್ಲಿನ ಸೈನಿಕ ಶಾಲೆಯಲ್ಲಿನ ಹಾಕಿ ಕ್ರೀಡಾಂಗಣ, ಗಾಂಧಿ ಭವನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮಾಡಲಾಯಿತು. ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಚಿವರಾದ ಸಿ.ಸಿ. ಪಾಟೀಲ, ಆನಂದ ಸಿಂಗ್, ಶಾಸಕರಾದ ಡಾ.ವೀರಣ್ಣ ಚರಂತಿಮಠ, ಸೋಮನಗೌಡ ಪಾಟೀಲ ಸಾಸನೂರ, ರಮೇಶ ಭೂಸನೂರ, ಉಪಸ್ಥಿತರಿದ್ದರು.