ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ನೂತನ ಕಟ್ಟಡ ಉದ್ಘಾಟಿಸಿದ ಸಿಎಂ

ಹೊಸದಿಗಂತ ವರದಿ ಕಲಬುರಗಿ:

ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದ ರಸ್ತೆಯಲ್ಲಿ 18.50 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಕಲಬುರಗಿ ನಗರ ಪೋಲೀಸ್‌ ಆಯುಕ್ತಾಲಯದ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಉದ್ಘಾಟಿಸಿದರು.

ನಂತರ ಸಚಿವ-ಶಾಸಕರೊಂದಿಗೆ ಕಟ್ಟಡವನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು ವಿಸಿಟರ್ ಪುಸ್ತಕದಲ್ಲಿ ಹಸ್ತಾಕ್ಷರ ಮಾಡಿ, ನೂತನ ಕಚೇರಿಗೆ ಕೂಡಲೇ ಕಚೇರಿ ವರ್ಗಾಸಯಿಸಿ ಕೆಲಸ ಆರಂಭಿಸುವಂತೆ ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ ಅವರಿಗೆ ಸೂಚಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ ಅವರು ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಇದಕ್ಕೂ ಮೊದಲು ಪೊಲೀಸ್ ತುಕಡಿಯಿಂದ ಮುಖ್ಯಮಂತ್ರಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು.

ಕೇಂದ್ರ ರಸಾಯನಿಕ, ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಇಲಾಖೆಯ ರಾಜ್ಯ ಸಚಿವ ಭಗವಂತ ಖೂಬಾ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಮುರುಗೇಶ ಆರ್. ನಿರಾಣಿ, ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಸಚಿವ ಮುನಿರತ್ನ ಅವರು ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!