ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರಿನಲ್ಲಿ ಇಂದಿನಿಂದ ನವೆಂಬರ್ 2ರವರೆಗೆ ನಡೆಯಲಿರುವ ‘ಚೀಫ್‌ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ 2025- ಅಂತಾರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ರಾಜ್ಯಸರ್ಕಾರ ಕ್ರೀಡೆಗೆ ವಿಶೇಷ ಒತ್ತು ನೀಡಿದೆ ಎಂದು ತಿಳಿಸಿದರು. ಪಂದ್ಯಾವಳಿಯಲ್ಲಿ ಭಾರತ, ಅಮೆರಿಕಾ, ರಷ್ಯಾ, ಯುಎಇ, ಮಲೇಷ್ಯಾ, ಕೆನಡಾ ಇಂಡೋನೇಷ್ಯಾ, ಶ್ರೀಲಂಕಾ, ಥೈಲ್ಯಾಂಡ್, ಬಾಂಗ್ಲಾದೇಶ, ಸಿಂಗಾಪುರ, ಇಂಗ್ಲೆಂಡ್ ಸೇರಿದಂತೆ 12 ದೇಶಗಳ ಸುಮಾರು 450ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ.
ಪುರುಷರ ಸಿಂಗಲ್ಸ್, ಮಹಿಳಾ ಸಿಂಗಲ್ಸ್, ಪುರುಷರ ಡಬಲ್ಸ್, ಮಹಿಳಾ ಡಬಲ್ಸ್, ಮಿಕ್ಸೆಡ್ ಡಬಲ್ಸ್ ವಿಭಾಗಗಳಲ್ಲಿ ಪಂದ್ಯ ನಡೆಯಲಿದೆ.
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಬಂದರು ನಗರಿಯಲ್ಲಿ ಸಿಎಂ ಚಾಲನೆ: 12 ದೇಶಗಳ ಕ್ರೀಡಾಪಟುಗಳು ಭಾಗಿ!

