ರಾಜ್ಯ ಉನ್ನತ ಶಿಕ್ಷಣ ಪ್ರವೇಶಾತಿ ಉತ್ತಮಪಡಿಸುವಲ್ಲಿ ಯೋಜನೆಗಳ ರೂಪಿಸಲು ಸಿಎಂ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಉನ್ನತ ಶಿಕ್ಷಣ ಪ್ರವೇಶಾತಿಯಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ 12ನೇ ಸ್ಥಾನದಲ್ಲಿದ್ದು, ಮತ್ತಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯದಲ್ಲಿ ಉನ್ನತ ಶಿಕ್ಷಣದಲ್ಲಿ ಒಟ್ಟು 24 ಲಕ್ಷ ವಿದ್ಯಾರ್ಥಿಗಳಿದ್ದು, 5 ಲಕ್ಷ ವಿದ್ಯಾರ್ಥಿಗಳು ಸರಕಾರಿ ಕಾಲೇಜುಗಳಲ್ಲಿ ಕಲಿಯುತ್ತಿದ್ದಾರೆಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗ ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣಕ್ಕೆ ಒಟ್ಟಾರೆ ಪ್ರವೇಶಾತಿ ರಾಜ್ಯದಲ್ಲಿ ಶೇ.36 ರಷ್ಟಿದೆ. ದೇಶದ ಶೇಕಡಾವಾರು 27.30 ರಷ್ಟಿದೆ. ಉನ್ನತ ಶಿಕ್ಷಣ ಪ್ರವೇಶಾತಿಯಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ 12ನೇ ಸ್ಥಾನದಲ್ಲಿದ್ದು, ಇನ್ನಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕು. ಕನ್ನಡ ವಿಶ್ವವಿದ್ಯಾಲಯ ಮತ್ತು ಜಾನಪದ ವಿಶ್ವವಿದ್ಯಾಲಯಗಳ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲು ಇಲಾಖಾ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.

ಉನ್ನತ ಶಿಕ್ಷಣಕ್ಕೆ ಪ್ರಸಕ್ತ ಆಯವ್ಯಯದಲ್ಲಿ 5862 ಕೋಟಿ ರೂ. ಒದಗಿಸಲಾಗಿದ್ದು, ಇದುವರೆಗೆ 3713.73 ಕೋಟಿ ರೂ. ವೆಚ್ಚ ಮಾಡಿ ಶೇ.72.87 ಪ್ರಗತಿ ಸಾಧಿಸಲಾಗಿದೆ. ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಬಜೆಟ್‍ನಲ್ಲಿ 250 ಕೋಟಿ ರೂ. ಒದಗಿಸಲಾಗಿದ್ದು, ಇದನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!